ಬೆಂಗಳೂರು: ಸಕ್ರಬೈಲು ಆನೆ ಶಿಬಿರದಲ್ಲಿ ನಾಲ್ಕು ಆನೆಗಳು ಗಾಯದಿಂದ ಬಳಲುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದಿರುವ ಸಚಿವ ಈಶ್ವರ್ ಖಂಡ್ರೆ ಅವರು, ಸಕ್ರೆಬೈಲು ಆನೆ ಶಿಬಿರದಲ್ಲಿರುವ ಬಾಲಣ್ಣ ಎಂಬ ಆನೆಯನ್ನು ಶಿವಮೊಗ್ಗ ದಸರಾಗೆ ಕಳುಹಿಸಲಾಗಿತ್ತು. ಆ ವೇಳೆ ಗಾಯಗೊಂಡಿದ್ದ ಆನೆಗೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಆಗಿರುವ ನಿರ್ಲಕ್ಷ್ಯದಿಂದ ಸೋಂಕು ಆಗಿ ನರಳುತ್ತಿದೆ. ಜೊತೆಗೆ ಶಿಬಿರದಲ್ಲಿರುವ ಮತ್ತೊಂದು ಆನೆ ಸಾಗರ್ ಸೇರಿದಂತೆ 4 ಆನೆಗಳಿಗೆ ಗಾಯದಿಂದ ಬಳಲುತ್ತಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಜಾನುವಾರುಗಳ ಅಕ್ರಮ ಸಾಗಾಟ: 20 ಕರುಗಳನ್ನು ರಕ್ಷಿಸಿದ ಪೊಲೀಸರು
ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ವರದಿಯಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಗಣಿಸಿದೆ. ರಾಜ್ಯದಲ್ಲಿರುವ ಎಲ್ಲಾ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯದಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…