ರಾಜ್ಯ

ಮುಸ್ಲಿಂರಿಗೆ 4% ಮೀಸಲಾತಿ ಅಸಾಂವಿಧಾನಿಕ: ಅರವಿಂದ್‌ ಬೆಲ್ಲದ್‌

ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದು ಸರಿಯಲ್ಲ. ಇದು ಅಸಾಂವಿಧಾನಿಕ ನಡೆ. ಇದನ್ನು ಖಂಡಿಸಿ ಕೋರ್ಟ್‌ ಮೊರೆ ಹೋಗುತ್ತೇವೆ ಎಂದು ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ.

ಇಂದು ನಗರದಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಿರುವುದರ ಕುರಿತು ಮಾತನಾಡಿದ ಅವರು, ಮುಸ್ಲಿಂರಿಗೆ 4% ಮೀಸಲಾತಿ ನೀಡುವ ಬಿಲ್‌ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಇದು ಕಾಂಗ್ರೆಸ್‌ ಸರ್ಕಾರದ ಅಸಾಂವಿಧಾನಿಕ ನಡೆ. ಈ ಬಿಲ್‌ಗೆ ಒಪ್ಪಿಗೆ ಸೂಚಿಸದಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.

ಕಾಂಗ್ರೆಸ್‌ ಸರ್ಕಾರದಿಂದ ಓಲೈಕೆ ರಾಜಕಾರಣ ನಡೆಯುತ್ತಿದೆ. ಮುಸ್ಲಿಂರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಿರುವುದು ಸರಿಯಲ್ಲ. ಈ ಸಂಬಂಧ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ. ಮೀಸಲಾತಿ ನೀಡಿರುವುದನ್ನು ಖಂಡಿಸಿ ನ್ಯಾಯಾಲಯದ ಮೋರೆ ಹೋಗುತ್ತೇವೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

10 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

28 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

1 hour ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

1 hour ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…

1 hour ago