ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್‌ವೈ ಅಧಿಕಾರಾವಧಿಯಲ್ಲಿ ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು.
ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆನೆಂದು ತಿಳಿಸಿದರು.
ಈ ಬಗ್ಗೆ ನನಗೆ ನೋಟೀಸ್ ಕೊಡುವುದಾದರೇ ಕೊಡಲಿ, ನನ್ನನ್ನು ಪಕ್ಷದಿಂದ ಹೊರ ಹಾಕಲಿ, ಸತ್ಯ ಹೇಳಿದರೆ ಇವರಿಗೆಲ್ಲಾ ಭಯವಿದ್ದು, ಇವರನ್ನು ಭಯದಲ್ಲಿ ಇಡಬೇಕು. ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ನರೇಂದ್ರ ಮೋದಿ ಅವರಿಂದ ದೇಶ ಉಳಿದಿದೆ. ಈ ಹಿಂದೆಯೂ ದೇಶದಲ್ಲಿ ಹಲವಾರು ಹಗರಣಗಳು ನಡೆದಿದೆ. ಕಲ್ಲಿದ್ದಲು ಹಗರಣ, ೨ಜಿ ಹಗರಣಗಳು ನಡೆದಿವೆ. ಆದರೆ ಪ್ರಧಾನಿ ಮೋದಿ ಕಾಲದಲ್ಲಿ ಒಂದಾದರೂ ಹಗರಣ ನೋಡಿದ್ದೀರಾ ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಾರೆ. ಆದರೆ ಅವರಲ್ಲಿ ಒಬ್ಬರಿಗಾದರೂ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳುವ ತಾಕತ್ತು ಇದೆಯಾ?. ನಾವು ಮೋದಿಯವರಿಗಾಗಿ ಕೆಲಸ ಮಾಡುತ್ತೇವೆ ಬಿಎಸ್ ಯಡಿಯೂರಪ್ಪ ಅವರಿಗಾಗಿ ಅಲ್ಲ ಎಂದು ಕಿಡಿಕಾರಿದರು.
ಮುರುಗೇಶ್ ನಿರಾಣಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ, ಅವರೆಲ್ಲಾ ಹೇಗೆ ಉಪಾಧ್ಯಕ್ಷ ಆಗುತ್ತಾರೆ. ಇನ್ನು ಬಹಳಷ್ಟು ವಿಷಯಗಳಿದ್ದು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಎಲ್ಲವನ್ನು ಬಹಿರಂಗಗೊಳಿಸುವೇ ಎಂದು ಅಸಮಾಧಾನ ಹೊರಹಾಕಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…