ರಾಜ್ಯ

ಕೋವಿಡ್‌ ವೇಳೆಯಲ್ಲಿ ಬಿಎಸ್‌ವೈ ಸರ್ಕಾರದಿಂದ 40 ಸಾವಿರ ಕೋಟಿ ಹಗರಣ: ಯತ್ನಾಳ್​ ಆರೋಪ

ವಿಜಯಪುರ: ಕೊರೊನಾ ಮೊದಲನೇ ಅಲೆಯಲ್ಲಿ ಬಿಎಸ್​ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ 40,000 ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದೇ ಸರ್ಕಾರವಿದ್ದರೇನು ಕಳ್ಳರು, ಕಳ್ಳರೇ ಅಲ್ಲವೇ, ಬಿಎಸ್‌ವೈ ಅಧಿಕಾರಾವಧಿಯಲ್ಲಿ ಪ್ರತಿಯೊಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಿದ್ದಾರೆ. ಕೊರೊನಾ ಸಂದರ್ಭದಲ್ಲಿ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದರು. ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿದ್ರಿ. ಇದಕ್ಕೆ 10 ಸಾವಿರ ಬೆಡ್​​ ಬಾಡಿಗೆ ಪಡೆದಿದರು. ಆ ಹಣದಲ್ಲೇ ಬೆಡ್​​ಗಳನ್ನು ಖರೀದಿ ಮಾಡಿದ್ದರೆ ಉಳಿಯುತ್ತಿತ್ತು.

ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ? ಈ ವಿಚಾರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ವಿಧಾನಸೌಧದಲ್ಲಿ ಹೇಳಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕೆಂದು ವಿಧಾನಸೌಧದಲ್ಲಿ ಮಾತನಾಡಿದ್ದೆನೆಂದು ತಿಳಿಸಿದರು.

ಈ ಬಗ್ಗೆ ನನಗೆ ನೋಟೀಸ್‌ ಕೊಡುವುದಾದರೇ ಕೊಡಲಿ, ನನ್ನನ್ನು ಪಕ್ಷದಿಂದ ಹೊರ ಹಾಕಲಿ, ಸತ್ಯ ಹೇಳಿದರೆ ಇವರಿಗೆಲ್ಲಾ ಭಯವಿದ್ದು, ಇವರನ್ನು ಭಯದಲ್ಲಿ ಇಡಬೇಕು. ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ. ನರೇಂದ್ರ ಮೋದಿ ಅವರಿಂದ ದೇಶ ಉಳಿದಿದೆ. ಈ ಹಿಂದೆಯೂ ದೇಶದಲ್ಲಿ ಹಲವಾರು ಹಗರಣಗಳು ನಡೆದಿದೆ. ಕಲ್ಲಿದ್ದಲು ಹಗರಣ, ೨ಜಿ ಹಗರಣಗಳು ನಡೆದಿವೆ. ಆದರೆ ಪ್ರಧಾನಿ ಮೋದಿ ಕಾಲದಲ್ಲಿ ಒಂದಾದರೂ ಹಗರಣ ನೋಡಿದ್ದೀರಾ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಬಗ್ಗೆ ಎಲ್ಲರೂ ಟೀಕೆ ಮಾಡುತ್ತಾರೆ. ಆದರೆ ಅವರಲ್ಲಿ ಒಬ್ಬರಿಗಾದರೂ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳುವ ತಾಕತ್ತು ಇದೆಯಾ?. ನಾವು ಮೋದಿಯವರಿಗಾಗಿ ಕೆಲಸ ಮಾಡುತ್ತೇವೆ ಬಿಎಸ್‌ ಯಡಿಯೂರಪ್ಪ ಅವರಿಗಾಗಿ ಅಲ್ಲ ಎಂದು ಕಿಡಿಕಾರಿದರು.

ಮುರುಗೇಶ್‌ ನಿರಾಣಿ ಅವರ ಟೀಕೆಗೆ ಪ್ರತಿಕ್ರಿಯಿಸಿ, ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ, ಅವರೆಲ್ಲಾ ಹೇಗೆ ಉಪಾಧ್ಯಕ್ಷ ಆಗುತ್ತಾರೆ. ಇನ್ನು ಬಹಳಷ್ಟು ವಿಷಯಗಳಿದ್ದು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಎಲ್ಲವನ್ನು ಬಹಿರಂಗಗೊಳಿಸುವೇ ಎಂದು ಅಸಮಾಧಾನ ಹೊರಹಾಕಿದರು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

12 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

12 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

14 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

17 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

18 hours ago