ಕಲಬುರಗಿ ವಿಮಾನ ನಿಲ್ದಾಣಕ್ಕೆ 200 ಕೋಟಿ ರೂಪಾಯಿ ವೆಚ್ಚವಾಗಿದೆ. ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ 427 ಕೋಟಿ ರೂಪಾಯಿ ವೆಚ್ಚವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಜತೆ ಮಾತನಾಡಿದ್ದು ಶೀಘ್ರದಲ್ಲಿಯೇ ತನಿಖೆ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.
“ಸಂಸದ ಬಿ.ವೈ.ರಾಘವೇಂದ್ರ ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಯಾವ ಲೋಪಗಳಿವೆ ಎಂಬುದನ್ನು ತಿಳಿಸಿ, ಅದಕ್ಕೆ ಪರಿಹಾರ ಸೂಚಿಸಬೇಕಿತ್ತು. ಸರ್ಕಾರ, ಮುಖ್ಯಮಂತ್ರಿಗೆ ಹೆದರಿ ಸಭೆಯಲ್ಲಿ ಹೇಳಿಲ್ಲ. ಬದಲಾಗಿ ಸುದ್ದಿಗೋಷ್ಠಿ ನಡೆಸಿ ಯುವನಿಧಿ ಬಗ್ಗೆ ಮಾತನಾಡುವ ಮೂಲಕ ಇಬ್ಬಗೆಯ ನೀತಿ ಅನುಸರಿಸುತ್ತಿರುವುದು ಖಂಡನೀಯ” ಎಂದೂ ಸಹ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಮಧು ಬಂಗಾರಪ್ಪ ಇದ್ದಾರೆ ಎಂಬುದನ್ನು ಬಿವೈ ರಾಘವೇಂದ್ರ ನೆನಪಿನಲ್ಲಿಟ್ಟುಕೊಳ್ಳಬೇಕು. ಈ ಹಿಂದೆ ಯಾವುದೇ ಕಾಮಗಾರಿ ಕುರಿತು ಪರಿಶೀಲನೆ ನಡೆಸದ ಅವರು ಈಗ ಯಾಕೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಪ್ರಶ್ನೆ ಹಾಕಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…