ರಾಜ್ಯ

ಕರ್ನಾಟಕದಲ್ಲಿಂದು 44 ಹೊಸ ಕೊವಿಡ್‌ ಪ್ರಕರಣ; ಸಕ್ರಿಯ ಪ್ರಕರಣಗಳ ಸಂಖ್ಯೆ 79ಕ್ಕೆ ಏರಿಕೆ

ನೆರೆಯ ಕೇರಳದಲ್ಲಿ ಕೊವಿಡ್‌ ಹೊಸ ರೂಪಾಂತರ ಜೆಎನ್‌ 1 ಉಲ್ಬಣಗೊಳ್ಳುತ್ತಿದ್ದು, ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹಾಗೂ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಸೂಚನೆಯನ್ನು ನೀಡಿದೆ.

ಇನ್ನು ಇಂದು ಮಂಡ್ಯದಲ್ಲಿ ಹಾಗೂ ರಾಮನಗರದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಇಂದು ( ಡಿಸೆಂಬರ್‌ 19 ) ಒಟ್ಟು 44 ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ವರದಿ ಪ್ರಕಾರ ಇಂದು 44 ಹೊಸ ಪ್ರಕರಣಗಳು ವರದಿಯಾಗಿದ್ದರೆ, 35 ಜನ ಡಿಸ್‌ಚಾರ್ಜ್‌ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 79 ಇದ್ದು, ಕೊನೆಯ 24 ಗಂಟೆಗಳಲ್ಲಿ 722 ಟೆಸ್ಟ್‌ಗಳು ನಡೆದಿವೆ, 487 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 235 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ.

ಒಟ್ಟು 79 ಸಕ್ರಿಯ ಪ್ರಕರಣಗಳ ಪೈಕಿ 62 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 17 ಸೋಂಕಿತರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 6 ಸೋಂಕಿತರು ಐಸಿಯುನಲ್ಲಿದ್ದು, 11 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

andolana

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

8 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

10 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

13 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

14 hours ago