ರಾಜ್ಯ

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ ತನಿಖೆಗೆ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಇನಾಮ್ ರದ್ದು ಕಾಯಿದೆ ಅಡಿ ಹಾಸನದ ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಬೆಂಗಳೂರು ಕೆಂಗೇರಿ ಬಳಿಯ ಬಿಎಂ ಕಾವಲ್ ನಲ್ಲಿ ತಮಗೆ ಮಂಜೂರು ಮಾಡಲಾಗಿದೆ ಎನ್ನಲಾದ 482 ಎಕರೆ ಕಾಯ್ದಿಟ್ಟ ಅರಣ್ಯಭೂಮಿ ಸೇರಿದಂತೆ ಒಟ್ಟು 532 ಎಕರೆ ಜಮೀನಿನ ದಾಖಲೆಗಳನ್ನು 3 ತಿಂಗಳೊಳಗೆ ತಮ್ಮ ಹೆಸರಿಗೆ ಮಾಡಿಕೊಡುವಂತೆ ಆದೇಶ ಪಡೆದಿದ್ದಾರೆ.

90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರ್ಕಾರದ ಹೆಚ್ಚುವರಿ ಸರ್ಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರ್ಕಾರಕ್ಕಾಗಲೀ, ಅರಣ್ಯ ಇಲಾಖೆಗಾಗಲೀ ನೀಡಿರುವುದಿಲ್ಲ ಬದಲಾಗಿ ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನಮೂದಿಸಿ ಅರ್ಜಿದಾರರಿಗೆ ಅನುಕೂಲ ಮಾಡಿಕೊಡುವಂತೆ ವರ್ತಿಸಿದ್ದು, ಇದು ಶಂಕಾಸ್ಪದವಾಗಿದೆ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಸುಮಾರು 25 ಸಾವಿರ ಕೋಟಿ ರೂ. ಬೆಲೆ ಬಾಳುವ ಈ ಭೂಮಿಯ ಬಗ್ಗೆ ಕೊನೆ ಕ್ಷಣದಲ್ಲಿ ಇಲಾಖೆಗೆ ಮಾಹಿತಿ ಬಂದಿದ್ದು, ಕೂಡಲೇ ತಾವು ಸಭೆ ನಡೆಸಿ ಮೇಲ್ಮನವಿ ಸಲ್ಲಿಸಲು ಸೂಚಿಸಿರುವುದಾಗಿ ತಿಳಿಸಿರುವ ಈಶ್ವರ ಖಂಡ್ರೆ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಮೇಲೆ ಹೇಳಲಾದ ವ್ಯಕ್ತಿ ಮನ್ಮಥ ಅಲಿಯಾಸ್ ನೇಮಣ್ಣ ಗೌಡ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರಿನ ಅಂದಿನ ಉಪ ವಿಭಾಗಾಧಿಕಾರಿ ದಬ್ಜೀತ್ ಕುಮಾರ್ ಸದರಿ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ 25.09.2024ರ ತಮ್ಮ ಆದೇಶದಲ್ಲಿ ತಿಳಿಸಿರುತ್ತಾರೆ. ಬೆಂಗಳೂರು ಬಿ.ಎಂ. ಕಾವಲ್ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೇ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಲು ಸೂಚಿಸಿದ್ದು, 28.11.2025ರಂದು ದೂರು ಸ್ವೀಕರಿಸಿರುವ ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರು ಈವರೆಗೆ ಎಫ್.ಐ.ಆರ್. ದಾಖಲಿಸದೇ ಇರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ಈಶ್ವರ ಖಂಡ್ರೆ ಪತ್ರದಲ್ಲಿ ತಿಳಿಸಿದ್ದಾರೆ.

ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಹೆಚ್ಚುವರಿ ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದ್ದು, ಈ ಬಗ್ಗೆ ಒಂದು ವಿಶೇಷ ತಂಡ ರಚಿಸಿ ಅಥವಾ ಸಿಐಡಿಗೆ ವಹಿಸಿ ಸಮಗ್ರ ತನಿಖೆ ಮಾಡಿಸಲು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಎಸಿಎಫ್ ವಿರುದ್ಧ ಕ್ರಮಕ್ಕೂ ಸೂಚನೆ: ಈ ಮಧ್ಯೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಚಿಕ್ಕಮಗಳೂರಿನ ಅಂದಿನ ಉಪ ವಿಭಾಗಾಧಿಕಾರಿ ಸೂಚಿಸಿದ್ದರೂ, ದೂರು ದಾಖಲಿಸಲು ವಿಳಂಬ ಮಾಡಿರುವ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

26 mins ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

35 mins ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

2 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

2 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

3 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

3 hours ago