ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹೀರೆಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 483 ಪುಟಗಳ ದೋಷಾರೋಪ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸೋಮವಾರ(ಜುಲೈ.8) ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಏ.18 ರಂದು ಹುಬ್ಬಳ್ಳಿಯ ವಿದ್ಯಾನಗರದ ಖಾಸಗಿ ಕಾಲೇಜಿನ ಮುಂಬಾಗ ಆಕೆಯ ಸ್ನೇಹಿತ ಫಯಾಜ್ ಎಂಬಾತನು ಚಾಕುವಿನಿಂದ ಹಿರಿದು ನೇಹಾಳ ಹತ್ಯೆ ಮಾಡಿದ್ದನು. ಸ್ನೇಹಾಳಿಗೆ ಫಯಾಜ್ ಪ್ರೀತಿ ಮಾಡುವಂತೆ ಒತ್ತಾಯಿಸಿದ್ದ, ಇದನ್ನು ನಿರಾಕರಿಸಿದ ನೇಹಾ ಮೇಲೆ ಸಿಟ್ಟಿಗಾದ ಫಯಾಜ್ ಕಾಲೇಜಿನಲ್ಲೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ.
ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಈ ಕೊಲೆಯನ್ನು ಖಂಡಿಸಿ ರಾಜ್ಯಾದ್ಯಂತ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ನೇಹಾ ಹೀರೆಮಠ್ ಅವರ ಪ್ರಕರಣವನ್ನು ಸರ್ಕಾರ ಸಿಐಡಿ ಹಸ್ತಾಂತರಿಸಿ ತ್ವರಿತಗತಿಯಲ್ಲಿ ಪ್ರಕರಣ ತನಿಖೆ ಮುಗಿಸುವಂತೆ ಹೇಳಿತ್ತು.
ಸಿಐಡಿ ಡಿವೈಎಸ್‌ಪಿ ಎನ್.ಎಚ್ ಪೈಕ್ ಅವರ ತಂಡ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ 483 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…