ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೌಕರರಿಗೆ ತಲಾ ಐದು ಸಾವಿರ ರೂ. ಪ್ರೋತ್ಸಾಹ
ಧನ ನೀಡಲು ಸರ್ಕಾರ ಮುಂದಾಗಿದೆ.
ರಾಜ್ಯ ಸರ್ಕಾರಿ ನೌಕರರು ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ (ಸಿಎಲ್ಟಿ ಪರೀಕ್ಷೆಯಲ್ಲಿ) ಉತ್ತೀರ್ಣರಾಗಬೇಕೆಂದು ಈ ಹಿಂದೆ ಸರ್ಕಾರ ತಿಳಿಸಿತ್ತು. ಇದೀಗ ಪ್ರೋತ್ಸಾಹ ಧನ ನೀಡುವ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 17, 2021ರೊಳಗೆ ಉತ್ತೀರ್ಣರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರಿಗೆ ಮಾತ್ರ ಪ್ರೋತ್ಸಾಹ ಧನದ ಸೌಲಭ್ಯಅನ್ವಯವಾಗಲಿದೆ.
ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪ್ರಮಾಣ ಪತ್ರವನ್ನು ಪರಿಶೀಲಿಸಿ, ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಸಂಬಂಧಪಟ್ಟ ಸಕ್ಷಮ ಪ್ರಾಕಾರಿಗಳು ಪ್ರೋತ್ಸಾಹ
ಧನವನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.
ಪ್ರೋತ್ಸಾಹ ಧನವನ್ನು ಸರ್ಕಾರಿ ನೌಕರರು ಪಡೆಯುವ ವೇತನದಲ್ಲಿ ಸೇರಿಸಿ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ನಡೆಸಲಾಯಿತು. ನೌಕರರಿಗೆ ನೀಡಲ್ಪಡುವ ಪ್ರಮಾಣಪತ್ರದ ನಮೂನೆ ಅಂತಿಮಗೊಳ್ಳದ ಹಿನ್ನೆಲೆಯಲ್ಲಿ ಪ್ರೋತ್ಸಾಹ ಧನ ನೀಡಲು ತಡೆ ನೀಡಲಾಗಿತ್ತು. ಇದೀಗ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿರುವುದರಿಂದ ಪ್ರೋತ್ಸಾಹಧನ ನೀಡಲು ಕ್ರಮ ವಹಿಸಲಾಗಿದೆ.
ನೇರ ನೇಮಕಾತಿ ಹೊಂದಿರುವ ಮತ್ತು ಸೇವಾನಿರತ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ನಿಗದಿತ ಅಂಕ ಪಡೆದು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಸರ್ಕಾರ ಅಸೂಚನೆ ಹೊರಡಿಸಿದೆ. ಅನುತ್ತೀರ್ಣರಾಗುವ ನೌಕರರು ಪರಿವೀಕ್ಷಣಾ ಅವ, ಬಡ್ತಿ ಹಾಗೂ ವಾರ್ಷಿಕ ವೇತನ ಹೆಚ್ಚಳ ಪಡೆಯಲು ಅನರ್ಹತೆ ಹೊಂದುತ್ತಾರೆ. ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ, ಇನ್ನಿತರ ಎಲ್ಲ ಅಭ್ಯರ್ಥಿಗಳಿಗೆ ಈ ಪರೀಕ್ಷೆ ಕಡ್ಡಾಯ.
ರಾಜ್ಯ ಸರ್ಕಾರ ಅನುಮೋದಿಸಿರುವ ಕಿಯೋನಿಕ್ಸ್ ಸಂಸ್ಥೆಯ ಮೂಲಕ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleನಾಳೆ ಮೊಳಗಲಿದೆ ಪ್ರಜಾಧ್ವನಿ : ಚಾ.ನಗರ, ಮೈಸೂರಿನಲ್ಲಿ ಕೈ ಸಮಾವೇಶ
Next Article ‘ಸುಧಾಕರ್ಗೆ ಸಿಎಜಿ ವರದಿ ಅರ್ಥವಾಗಿಲ್ಲ’ : ಸಿದ್ದರಾಮಯ್ಯ