ರಾಜ್ಯ

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಧನ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಸರ್ಕಾರ ಪರಿಹಾರದ ಚೆಕ್‌ ಅನ್ನು ಸಿದ್ದಪಡಿಸಿದ್ದು, ಇಂದು (ಮಂಗಳವಾರ) ಮೈತ ಯೋಧನ ಕುಟುಂಬಕ್ಕೆ ಚೆಕ್‌ ಹಸ್ತಾಂತರಿಸಲಾಗುವುದು.

ಸಿಎಂ ಸಿದ್ದರಾಮಯ್ಯ ಅವರು ಕ್ಯಾಪ್ಟನ್‌ ಪ್ರಾಂಜಲ್‌ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ನಂತರ ಧಣ ಸಹಾಯ ನೀಡುವುದಾಗಿ ಘೋಷಣೆ ಮಾಡಿದ್ದರು. ಪ್ರಜ್ವಲ್‌ ಅವರ ದೇಶ ಸೇವೆ ಅನನ್ಯ. ಸಮರ್ಪಣಾ ಭಾವವನ್ನು ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದಿದ್ದಾರೆ.

ಸಿಎಂ ಟ್ವೀಟ್‌ : ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ” ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ” ಎಂದಿದ್ದಾರೆ.

ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿಉಗ್ರರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ.ಪ್ರಾಂಜಲ್‌ ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರಕ್ಕೆ ಸರಕಾರಿ ಮತ್ತು ಸೇನಾ ಗೌರವ ಸಲ್ಲಿಸುವುದರೊಂದಿಗೆ ಅಂತ್ಯ ಸಂಸ್ಕಾರ ಬೆಂಗಳೂರಿನ ಬನ್ನೇರುಘಟ್ಟದ ಸಮೀಪ ನಡೆಸಲಾಯಿತು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

4 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

5 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

6 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

9 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

10 hours ago