Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ವಿರುದ್ಧ ಸಿಬಿಐನಲ್ಲಿ ಇನ್ನೂ 50 ಪ್ರಕರಣ ಬಾಕಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ಸಿಬಿಐನಲ್ಲಿ ಇದೇ ಪ್ರಥಮ ಬಾರಿಗೆ ಪ್ರಕರಣ ದಾಖಲಾಗಿರುವುದು ಎಂದು ಹೇಳಿದ್ದಾರೆ. ಆದರೆ, ಅವರ ವಿರುದ್ಧ ಲೋಕಾಯುಕ್ತದಲ್ಲಿ 50 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವೂ ಇನ್ನೂ ತನಿಖಾ ಹಂತದಲ್ಲಿವೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇಂದು ಬೆಂಗಳೂರಿನ ಜಾ.ದಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನನ್ನ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್‌ ಅನುಮತಿ ರಾಜಕೀಯ ಪ್ರೇರಿತವಾಗಿದೆ. ಅಲ್ಲದೆ, ಈಗಿನ ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ 2011ರಲ್ಲಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿದ್ದಾಗ ಏನು ಮಾತನಾಡಿದ್ದಾರೆ ಎಂದು ತರಿಸಿಕೊಂಡು ನೋಡಲಿ ಎಂದು ಸವಾಲು ಹಾಕಿದರು.

ರಾಜ್ಯಪಾಲರು ಸರ್ಕಾರದ ಮಾಹಿತಿ ಕೋರಿ ಪತ್ರ ಬರೆಯುತ್ತಾರೆ. ಆದರೆ ಕ್ಯಾಬಿನೆಟ್‌ ಅನುಮತಿ ಇಲ್ಲದೆ ಉತ್ತರ ಕೊಡಬಾರದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಆದೇಶಿಸುತ್ತಾರೆ. ಸರ್ಕಾರದ ಅಕ್ರಮ, ಅಧಿಕಾರ ದುರುಪಯೋಗ ಹೊರಗಡೆ ಎಂಬುದಕ್ಕೆ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ನನ್ನ ವಿರುದ್ಧ ರಾಜಕೀಯ ಆರೋಪ ಇದೇ ಪ್ರಥಮ ಬಾರಿಗೆ ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ. ಆದರೆ ಅವರ ವಿರುದ್ಧ ಇನ್ನೂ 50 ಪ್ರಕರಣಗಳು ಬಾಕಿ ಇವೆ. ದೇಶದಲ್ಲಿ ಸರ್ಕಾರದ ಅಂಗ ಸಂಸ್ಥೆಗಳನ್ನು ದುರುಪಯೋಗ ಮಾಡುವುದು, ಒತ್ತಡ ತರುವುದು ಇದೇ ಹೊಸದೆನಲ್ಲಾ ಎಂದು ಕಿಡಿಕಾರಿದರು.

Tags:
error: Content is protected !!