ರಾಜ್ಯ

ಸಾಹಿತ್ಯ ಸಮ್ಮೇಳನದಲ್ಲಿ ಸುವರ್ಣ ಸಂಭ್ರಮ ಲಾಂಛನ ಬಳಸಿ: ಶಿವರಾಜ ತಂಗಡಗಿ

ಬೆಂಗಳೂರು: ಮುಂಬರುವ ಡಿಸೆಂಬರ್ ನಲ್ಲಿ ಮಂಡ್ಯದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲಾ ಪತ್ರ ವ್ಯವಹಾರಗಳಲ್ಲಿ ಹಾಗೂ ಆಯೋಜಿಸಲಾಗುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ ಸಂಭ್ರಮ ಲಾಂಛನವನ್ನು ಕಡ್ಡಾಯವಾಗಿ ಬಳಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ಅವರು ಗುರುವಾರ (ಜು.25) ವಿಕಾಸಸೌಧದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಜಂಟಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಾಹಿತ್ಯ ಸಮ್ಮೇಳನದ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಾಹಿತ್ಯ ಸಮ್ಮೇಳನ ನಡೆಸಲು ಸೂಕ್ತ ಸ್ಥಳಾವಕಾಶವನ್ನು ಗುರುತಿಸಬೇಕಿದೆ. ಕಾರ್ಯಕ್ರಮ ನಡೆಯುವ ಸ್ಥಳ ಮತ್ತು ವಾಹನ ನಿಲುಗಡೆಯ ಸ್ಥಳಗಳು ಹೆಚ್ಚು ಅಂತರದಲ್ಲಿದ್ದರೆ, ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ಆದ್ದರಿಂದ ಸಾಧ್ಯವಾದಷ್ಟು ಈ ಎರಡೂ ಸ್ಥಳಗಳು ಸಮೀಪವಿರುವಂತೆ ನೋಡಿಕೊಳ್ಳಬೇಕೆಂದು ಅವರು ಹೇಳಿದರು.

ಸಾಹಿತ್ಯ ಸಮ್ಮೇಳನಕ್ಕೆ ಒಟ್ಟು ರೂ.30.00 ಕೋಟಿ ಅನುದಾನ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೋರಿದ್ದಾರೆ. ಈ ಬಗ್ಗೆ ಸರ್ಕಾರ ಶೀಘ್ರವೇ ಕ್ರಮಕೈಗೊಂಡು ತಿಳಿಸಲಾಗುವುದು ಎಂದು ಅವರು ಹೇಳಿದರು. ಕಾರ್ಯಕ್ರಮದ ಆಯೋಜನೆಯ ಸಂಪೂರ್ಣ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸಲು ಸಹ ಅವರು ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಈಗಾಗಲೇ ಸಮ್ಮೇಳನ ಆಯೋಜನೆಗೆ ಎರಡು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಇದರಲ್ಲಿ ಯಾವುದು ಸೂಕ್ತ ಎಂಬುದನ್ನು ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಧರಿಸಲಿ. ಆದಷ್ಟು ಶೀಘ್ರವಾಗಿ ಸ್ಥಳ ನಿಗದಿಯಾದರೆ, ಅಲ್ಲಿಗೆ ಬೇಕಾದ ಅನುಕೂಲಗಳನ್ನು ಕಲ್ಪಿಸುವ ಕೆಲಸವನ್ನು ಆರಂಭಿಸಬಹುದು ಎಂದರು. ಜೊತೆಗೆ ಇಡೀ ಮಂಡ್ಯ ಸಾಹಿತ್ಯ ಸಮ್ಮೇಳನದ ಸಡಗರವನ್ನು ಸಂಭ್ರಮಿಸುವಂತೆ ಮಾಡಲು ನಗರದ ಎಲ್ಲಾ ಭಾಗಗಳು ಹಾಗೂ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆಯ ನಡುವೆ ವಿವಿಧ ಕಾರ್ಯಕ್ರಮಗಳ ಆಯೋಜನೆ ಮತ್ತು ನಗರವನ್ನು ಸಿಂಗರಿಸುವ ಹಾಗೆ ತಯಾರಿಗಳು ಆಗಬೇಕು ಎಂದರು.

ಸಭೆಯಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಅದರದೇ ವಿಶೇಷ ಮಹತ್ವವಿದೆ. ಈ ಸಮ್ಮೇಳನಕ್ಕೆ ಅಮೇರಿಕಾದಿಂದ ಅನೇಕ ಗಣ್ಯರು ಆಗಮಿಸುತ್ತಾರೆ. 87ನೇ ಸಮ್ಮೇಳನವಾಗಿರುವುದರಿಂದ 87 ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ದಿನೇಶ್ ಗೂಳಿಗೌಡ, ಉದಯ ಕೆ.ಎಂ, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ, ಮಂಡ್ಯ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಡಾ. ಬಿಎಂ ಪಟೇಲ್ ವಿಳಂದು, ನೇ.ಭ. ರಾಮಲಿಂಗಶೆಟ್ಟಿ ಸೇರಿದಂತೆ ಅನೇಕ ಅಧಿಕಾರಿಗಳು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

24 mins ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

1 hour ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

1 hour ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

1 hour ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

2 hours ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

2 hours ago