ರಾಜ್ಯ

ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ : ಸಿಎಂ ಸಿದ್ದರಾಮಯ್ಯ ಮಾಲಾರ್ಪಣೆ

ಬೆಂಗಳೂರು : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸಂಸ್ಥಾಪನೆ ಮಾಡಿ ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಕೆರೆಗಳು ಹಾಗೂ ದೇವಸ್ಥಾನಗಳಿರಲು ಕೆಂಪೇಗೌಡರೇ ಕಾರಣ. ವೃತ್ತಿ ಆಧಾರದ ಮೇಲೆ  ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿ ವ್ಯಾಪಾರ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಇಂದು  ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರೇ ಕಾರಣ ಎಂದು ಹೇಳಿದರು

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

20 mins ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

55 mins ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

1 hour ago

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

1 hour ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

2 hours ago

10 ದಿನ ಚಂದ್ರನ ಸುತ್ತಿ ಸುರಕ್ಷಿತವಾಗಿ ಭೂಮಿಗೆ ಬಂದಿಳಿದ ಆರ್ಟೆಮಿಸ್‌-2 ಗಗನಯಾತ್ರಿಗಳು

ವಾಷಿಂಗ್ಟನ್ : ನಾಸಾದ ಐತಿಹಾಸಿಕ ಆರ್ಟೆಮಿಸ್‌-2 ಮಿಷನ್ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚಂದ್ರನನ್ನು ಸುತ್ತುವಳಿ ಮಾಡಿ ಭೂಮಿಗೆ ವಾಪಸಾಗುವ ಮೊದಲ ಕ್ರೂಡ್…

2 hours ago