esAhwar khandre (2)
ಬೆಂಗಳೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಅನುಮೋದನೆ ನೀಡಿದ್ದಾರೆ.
ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ 4 ತಂಡದಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಈ ಪಡೆ ಚಿರತೆ ಹಾವಳಿ ಇರುವ ಗ್ರಾಮಗಳಲ್ಲಿ ಗಸ್ತು ನಡೆಸಲಿದ್ದು, ರೈತರ ಜಮೀನು, ವಸತಿ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಅದರ ಸೆರೆಗೆ ತುರ್ತು ಕ್ರಮ ವಹಿಸಲಿದೆ.
ಕಾರ್ಯಪಡೆಯು ಜಿಲ್ಲಾಡಳಿತದೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…
ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…
ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…
ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…
ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…
ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…