Mysore
25
scattered clouds

Social Media

ಮಂಗಳವಾರ, 27 ಜನವರಿ 2026
Light
Dark

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.

ಬೇರೆ ಬೇರೆ ಕಡೆ ಹೊರಡಬೇಕಿದ್ದ 28 ವಿಮಾನಗಳು ಹಾಗೂ ಆಗಮಿಸಬೇಕಿದ್ದ 32 ವಿಮಾನಗಳ ಹಾರಾಟ ರದ್ದಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಏರ್‌ಲೈನ್ಸ್‌ ಸಂದೇಶ ರವಾನಿಸಿದೆ.

ಇದನ್ನು ಓದಿ: ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ಒಂದು ವಾರದಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿತ್ತು. ಸದ್ಯ ಇಂಡಿಗೋ ವಿಮಾನ ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಸಂಚಾರ ಕ್ರಮೇಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ವಿಮಾನ ಹಾರಾಟ ಭಾಗಶಃ ಸುಧಾರಿಸಿದ್ದು, ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ.

Tags:
error: Content is protected !!