ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.
ಬೇರೆ ಬೇರೆ ಕಡೆ ಹೊರಡಬೇಕಿದ್ದ 28 ವಿಮಾನಗಳು ಹಾಗೂ ಆಗಮಿಸಬೇಕಿದ್ದ 32 ವಿಮಾನಗಳ ಹಾರಾಟ ರದ್ದಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಏರ್‌ಲೈನ್ಸ್ ಸಂದೇಶ ರವಾನಿಸಿದೆ.
ಇದನ್ನು ಓದಿ: ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್ ಆಕ್ರೋಶ
ಒಂದು ವಾರದಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿತ್ತು. ಸದ್ಯ ಇಂಡಿಗೋ ವಿಮಾನ ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಸಂಚಾರ ಕ್ರಮೇಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ವಿಮಾನ ಹಾರಾಟ ಭಾಗಶಃ ಸುಧಾರಿಸಿದ್ದು, ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ.
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…
ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…
ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…
ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…
ವಾಷಿಂಗ್ಟನ್ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…