ರಾಜ್ಯ

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದಂತೆ ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಬಾರಿ ಭಾಗಿಯಾಗಿ ರಾಜ್ಯದ ಹೆಮ್ಮೆಯ ಪ್ರತೀಕವಾಗಿದ್ದ ಗಜೇಂದ್ರ ಚಾಮರಾಜನಗರ ಬೂದಿಪಡಗ ಶಿಬಿರದಲ್ಲಿ ಇತ್ತೀಚೆಗೆ ಒಂಟಿಯಾಗಿ ಹೋಗಿದ್ದ. ಸಾಮಾನ್ಯವಾಗಿ ಆನೆಗಳು ಗುಂಪಾಗಿ ವಾಸಿಸುವ ಸೂಕ್ಷ್ಮ ಮನಸ್ಸಿನ ಜೀವಿಯಾಗಿದ್ದು, ಒಂಟಿತನದಿಂದ ಕೃಶವಾಗಿದ್ದಾನೆ, ಕಾಡಿಗೆ ಮೇಯಲು ಬಿಟ್ಟರೆ, ಕಾಡಾನೆಗಳೊಂದಿಗೆ ಕಾದಾಡುವ ಸಾಮರ್ಥ್ಯವನ್ನೂ ಕಳೆದುಕೊಂಡಿದ್ದಾನೆ. ಹೀಗಾಗಿ ಸುರಕ್ಷಿತ ಆನೆ ಶಿಬಿರಕ್ಕೆ ಗಜೇಂದ್ರನನ್ನು ಸ್ಥಳಾಂತರಿಸಬೇಕು ಎಂದು ಸಾಮಾಜಿಕ ಜಾಲ ತಾಣದಲ್ಲಿ ಅಭಿಯಾನವೂ ನಡೆಯುತ್ತಿತ್ತು. ಹಲವರು ಈಶ್ವರ ಖಂಡ್ರೆ ಅವರಿಗೆ ಮನವಿಯನ್ನೂ ಅರ್ಪಿಸಿದ್ದರು.

ಜನರ ಭಾವನೆಗಳಿಗೆ ಮತ್ತು ಮನವಿಗೆ ಸ್ಪಂದಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಕೂಡಲೇ ನಿಯಮಾನುಸಾರ ಕ್ರಮ ವಹಿಸುವಂತೆ ಕಳೆದ 26ರಂದು ಲಿಖಿತ ಆದೇಶ ನೀಡಿದ್ದರು.

ಇಂದು ಮಧ್ಯಾಹ್ನ ಬೂದಿ ಪಡಗದಲ್ಲಿ ಗಜೇಂದ್ರನಿಗೆ ಪೂಜೆ ಸಲ್ಲಿಸಿ, ಇಲಾಖೆಯ ಆನೆ ರಕ್ಷಣೆ ವಾಹನದಲ್ಲಿ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಗಜೇಂದ್ರ ಆನೆಯ ಅಭಿಮಾನಿಗಳು, ಸಾರ್ವಜನಿಕರ ಭಾವನೆಗೆ ಸ್ಪಂದಿಸಿದ ಈಶ್ವರ ಖಂಡ್ರೆ ಅವರಿಗೆ ಸಾಮಾಜಿಕ ತಾಣಗಳಲ್ಲಿ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

18 mins ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

54 mins ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

55 mins ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

57 mins ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

57 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

1 hour ago