krs damm
ಬೆಂಗಳೂರು: ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ಎದುರಾಗಿದ್ದರೂ ಪ್ರಮುಖ ನದಿಗಳ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಶೇ.64ರಷ್ಟು ನೀರು ಸಂಗ್ರಹವಾಗಿದೆ.
ಕಾವೇರಿ ಹಾಗೂ ಕೃಷ್ಣ ಕೊಳ್ಳದ ಜಲಾನಯನ ಭಾಗದಲ್ಲಿ ಮುಂಗಾರು ಆರಂಭಗೊಂಡಾಗಿನಿಂದಲೂ ಸತತ ಮಳೆಯಾಗುತ್ತಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದ 14 ಪ್ರಮುಖ ಜಲಾಶಯಗಳ ಗರಿಷ್ಠ ನೀರಿನ ಸಂಗ್ರಹ ಸಾಮಥ್ಯ 895.62 ಟಿಎಂಸಿ ಅಡಿಗಳಾಗಿದ್ದು, ಪ್ರಸ್ತುತ 574.82 ಟಿಎಂಸಿ ಅಡಿ ನೀರು ಸಂಗ್ರವಾಗಿದೆ. ಸುಮಾರು 2,92,000 ಕ್ಯೂಸೆಕ್ಸ್‌ನಷ್ಟು ನೀರಿನ ಒಳಹರಿವು ಇದ್ದು, ಸುಮಾರು 2 ಲಕ್ಷ ಕ್ಯೂಸೆಕ್‍ನಷ್ಟು ಹೊರಹರಿವು ಇದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 259.81 ಟಿಎಂಸಿ ಅಡಿಯಷ್ಟು ಮಾತ್ರ ಜಲಾಶಯಗಳಲ್ಲಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದುಪ್ಪಟ್ಟು ನೀರಿನ ಸಂಗ್ರಹವಿದ್ದು, ಕುಡಿಯುವ ನೀರು ಹಾಗೂ ನೀರಾವರಿ ಪ್ರದೇಶಗಳ ಬೆಳೆಗಳಿಗೆ ನೀರು ಒದಗಿಸುವ ಸಮಸ್ಯೆ ಸದ್ಯಕ್ಕೆ ಪರಿಹಾರವಾದಂತಾಗಿದೆ.
ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳ ಒಟ್ಟು ಗರಿಷ್ಠ ಸಾಮಥ್ರ್ಯ 328.18 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 149.39 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟಾರೆ ಶೇ.46ರಷ್ಟು ನೀರು ಸಂಗ್ರಹವಾಗಿದ್ದು, 70 ಸಾವಿರ ಕ್ಯೂಸೆಕ್‍ಗೂ ಅಧಿಕ ನೀರಿನ ಒಳಹರಿವಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 67.70 ಟಿಎಂಸಿ ಅಡಿಯಷ್ಟು ಮಾತ್ರ ನೀರಿತ್ತು. ಈಗಾಗಲೇ ಕೆಆರ್‍ಎಸ್ ಜಲಾಶಯ ಭರ್ತಿಯಾಗಿ ಬಾಗಿನವನ್ನು ಅರ್ಪಿಸಲಾಗಿದೆ.
ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳ ಒಟ್ಟು ಗರಿಷ್ಠ ನೀರಿನ ಸಾಮರ್ಥ್ಯ 114.57 ಟಿಎಂಸಿ ಅಡಿ, ಪ್ರಸ್ತುತ 105.51 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಶೇ.92ರಷ್ಟು ಭರ್ತಿಯಾಗಿವೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…