ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.
ಜೊತೆಗೆ 5.30 ಕೋಟಿ ರೂ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನನ್ನು ಝೇವಿಯರ್ ಎಂದು ಗುರುತಿಸಲಾಗಿದ್ದು, ಈತ ಕಾನ್ಸ್‌ಟೇಬಲ್ ಅಣ್ಣಪ್ಪನ ಸ್ನೇಹಿತ ಎಂದು ಗುರುತಿಸಲಾಗಿದೆ. ಇಬ್ಬರು ಸೇರಿಕೊಂಡು ಈ ದರೋಡೆಗೆ ಸ್ಕೆಚ್ ಹಾಕಿದ್ದರು.
ಇದನ್ನು ಓದಿ: 7 ಕೋಟಿ ದರೋಡೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರಪ್ರದೇಶದಲ್ಲಿ ಪತ್ತೆ
ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆ ಇನ್ಸ್‌ಪೆಕ್ಟರ್ ಅಣ್ಣಪ್ಪ ನಾಯಕ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯಕ್ ಇಡೀ ದರೋಡೆಯ ಮಾಸ್ಟರ್ ಮೈಂಡ್ ಎನ್ನಲಾಗಿದ್ದು, ಈತನ ಬಂಧನದ ಬೆನ್ನಲ್ಲೇ ಸ್ನೇಹಿತ ಝೇವಿಯರ್‌ನನ್ನು ಕೂಡ ಬಂಧಿಸಲಾಗಿದೆ.
ಅಣ್ಣಪ್ಪ ನಾಯ್ಕ್ ದರೋಡೆ ಮಾಡಲು ಹುಡುಗರ ಗ್ಯಾಂಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕು ಎಂದು ಈತ ಹುಡುಗರಿಗೆ ತರಬೇತಿ ಕೊಟ್ಟಿದ್ದನು. ಈತನ ಪ್ಲ್ಯಾನ್‌ನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದ್ದು, ಸಿಎಂಎಸ್ ಸೆಕ್ಯುರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…