ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಸಿಎಂಎಸ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗೋಪಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನು ಓದಿ: 7 ಕೋಟಿ ದರೋಡೆ ಪ್ರಕರಣ: ಸಿಎಂಎಸ್ ಮಾಜಿ ನೌಕರ ಅರೆಸ್ಟ್
ಕಳ್ಳತನವಾಗಿದ್ದ 7 ಕೋಟಿ ಪೈಕಿ 6 ಕೋಟಿ 70 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದ ಹಣವನ್ನು ಪೊಲೀಸರು ಸದ್ಯದಲ್ಲೇ ವಶಪಡಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಪೊಲೀಸ್ ಕಾನ್ಸ್‌ಟೇಬಲ್ ಅಣ್ಣಪ್ಪ ಹಾಗೂ ಸಿಎಂಎಸ್ ಮಾಜಿ ನೌಕರನನ್ನು ಪೊಲೀಸರು ಬಂಧಿಸಿದ್ದರು. ಇದರ ಜೊತೆಗೆ 5.30 ಕೋಟಿ ಹಣವನ್ನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.





