Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

cm siddaramaiah

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಘಟನೆ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡೆಗೆ ಹಾನಿ ಆಗಲಿದೆ ಎಂದು ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್‌ ಅನ್ನು ಅಮಾನತು ಮಾಡುವಂತೆ ಸೂಚಿಸಿದರು.

ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದರು. ಸದ್ಯ ಈ ಸಂಬಂಧ ಬೌರಿಂಗ್‌ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಆದೇಶ ನೀಡಿದ್ದಾರೆ.

 

 

Tags:
error: Content is protected !!