Mysore
28
few clouds

Social Media

ಬುಧವಾರ, 21 ಜನವರಿ 2026
Light
Dark

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.

ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು.

ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ ಪತ್ತೆಯಾಗಿತ್ತು. ಎಲ್ಲವೂ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿತ್ತು. ಈ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್‌ಎಸ್‌ಎಲ್‌ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್‌ ಕೇಂದ್ರಕ್ಕೆ ಅಸ್ಥಿಪಂಜರಗಳನ್ನು ರವಾನೆ ಮಾಡಲಾಗಿದೆ.

 

 

Tags:
error: Content is protected !!