Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್:‌ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್‌ ಆರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈಗಾಗಲೇ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಆದಷ್ಟು ಬೇಗನೇ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ೭೦ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್‌ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೇ ಸ್ಥಳ ಗುರುತಿಸಿ, ಹೊಸ ಮೆನು ಟೆಂಡರ್‌ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಡಿಸಿ, ಸಿಇಓ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಚಿವರು ತಮ್ಮ ಇಲಾಖೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೩೩೮೦೩ ಕಾಮಗಾರಿಗಳು ಮಂಜೂರಾಗಿವೆ. ಯೋಜನೆಯಡಿ ಇದುವರೆಗೂ ೨೭೯೯ ಕೋಟಿ ರೂ ಬಿಡುಗಡೆಯಾಗಿದ್ದು, ೧೮೮೩ ಕೋಟಿ ರೂ ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್‌ ಕರೆದು ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ೭೦ ಹೊಸ ಇಂದಿರಾ ಕ್ಯಾಂಟೀನ್‌ ತೆರೆಯಲು ಈಗಾಗಲೇ ಯೋಚನೆ ಮಾಡಲಾಗಿದೆ. ಕ್ಯಾಂಟೀನ್‌ನ್ನು ಯಾವ ಯಾವ ಸ್ಥಳಗಳಲ್ಲಿ ತೆರೆಯಬೇಕು ಹಾಗೂ ಸರಿಯಾದ ಮೆನು ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

 

Tags: