ಬೆಂಗಳೂರು: ಬೆಂಗಳೂರಿನಲ್ಲಿ 70 ಹೊಸ ಇಂದಿರಾ ಕ್ಯಾಂಟೀನ್ ಆರಂಭ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈಗಾಗಲೇ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್‌ಗಳ ನಿರ್ಮಾಣಕ್ಕೆ ಆದಷ್ಟು ಬೇಗನೇ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ೭೦ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೇ ಸ್ಥಳ ಗುರುತಿಸಿ, ಹೊಸ ಮೆನು ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಡಿಸಿ, ಸಿಇಓ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಚಿವರು ತಮ್ಮ ಇಲಾಖೆಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೩೩೮೦೩ ಕಾಮಗಾರಿಗಳು ಮಂಜೂರಾಗಿವೆ. ಯೋಜನೆಯಡಿ ಇದುವರೆಗೂ ೨೭೯೯ ಕೋಟಿ ರೂ ಬಿಡುಗಡೆಯಾಗಿದ್ದು, ೧೮೮೩ ಕೋಟಿ ರೂ ವೆಚ್ಚವಾಗಿದೆ. ಮುಂದಿನ ಎರಡು ವಾರಗಳ ಒಳಗಾಗಿ ಟೆಂಡರ್ ಕರೆದು ನಿಗದಿತ ಅವಧಿಯ ಒಳಗಾಗಿ ಅನುದಾನವನ್ನು ಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ೭೦ ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಈಗಾಗಲೇ ಯೋಚನೆ ಮಾಡಲಾಗಿದೆ. ಕ್ಯಾಂಟೀನ್‌ನ್ನು ಯಾವ ಯಾವ ಸ್ಥಳಗಳಲ್ಲಿ ತೆರೆಯಬೇಕು ಹಾಗೂ ಸರಿಯಾದ ಮೆನು ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…