ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದರಲ್ಲೂ ಸುಮಾರು ಶೇ.73 ರಷ್ಟು ಆನ್ ಲೈನ್ ಉದ್ಯೋಗ ವಂಚನೆ ಪ್ರಕರಣಗಳು ಹೆಚ್ಚಾಗಿ ಬೆಂಗಳೂರಿನಲ್ಲಿ ಕಂಡು ಬಂದಿರೋದು ಒಂದು ರೀತಿ ಆತಂಕವನ್ನುಂಟು ಮಾಡಿದೆ.
ಕರ್ನಾಟಕದಲ್ಲಿ 2020 ರಿಂದ ವರದಿಯಾದ ರಾಜ್ಯ ಅಪರಾಧ ದಾಖಲೆಗಳ ಬ್ಯೂರೋ ದತ್ತಾಂಶಗಳ ಪ್ರಕಾರ ಆನ್ ಲೈನ್ ಉದ್ಯೋಗ ವಂಚನೆಗಳಲ್ಲಿ ಸುಮಾರು ಶೇ 73 ರಷ್ಟು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೇ ಬೆಳಕಿಗೆ ಬಂದಿವೆ. ವಂಚನೆಗೆ ಒಳಗಾದವರಲ್ಲಿ ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳು ಶೇ.20 ರಿಂದ 30 ರಷ್ಟು ಇದ್ದರೆ, ಉಳಿದವರು ನಿರುದ್ಯೋಗಿಗಳು ಮತ್ತು ಪವೀಧರರು ಎಂಬುವುದು ತಿಳಿದುಬಂದಿದೆ.
ಕಳೆದ ಐದು ವರ್ಷಗಳಿಂದಲೂ ಕೂಡ ಕರ್ನಾಟಕದಲ್ಲಿ ಆನ್ ಲೈನ್ ಉದ್ಯೋಗ ವಂಚನೆಗಳ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಾ ಹೋಗುತ್ತಿವೆ. 2020ರ ಜನವರಿ 1 ಹಾಗೂ 2024 ರ ಮೇ25 ರ ನಡುವೆ ಒಟ್ಟು 9,479 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ 6,905 ಪ್ರಕರಣಗಳು ಬೆಂಗಳೂರು ನಗರದಲ್ಲೇ ವರದಿಯಾಗಿವೆ ಎಂಬ ಅಂಕಿ ಅಂಶಗಳು ಗೊತ್ತಾಗಿವೆ. ಕಳೆದ ವರ್ಷ 4,098 ಪ್ರಕರಣಗಳು ವರದಿಯಾಗಿದ್ದವು. ಆದರೆ ಈ ವರ್ಷ ಕಳೆದ ವರ್ಷದ ಅರ್ಧಕ್ಕಿಂತಲೂ ಹೆಚ್ಚು ಅಂದರೆ 2,185 ವರದಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…