Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ರಾಜ್ಯ ರೈಲ್ವೆಗೆ ಕೇಂದ್ರ ಸರ್ಕಾರದಿಂದ 7,750 ಕೋಟಿ ರೂ ಅನುದಾನ ಬಿಡುಗಡೆ: ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ

ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ  ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಕೆ.ಎಸ್‌.ಆರ್‌ ಬೆಂಗಳೂರು-ಶಿವಮೊಗ್ಗ ಟೌನ್‌ ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಹಾಗೂ ಕೆ.ಎಸ್‌.ಆರ್‌ ಬೆಂಗಳೂರು-ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿ ಮಾತನಾಡಿದರು.

ದೇಶದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಯುಪಿಎ ಸರ್ಕಾರ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಕೇವಲ 830 ಕೋಟಿ ರೂಪಾಯಿಗಳನ್ನು ಅನುದಾನ ನೀಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ 7,750 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿ ರೈಲ್ವೆ ಅಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ.

ದೇಶದಲ್ಲಿರುವ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಅನುದಾನವನ್ನು ಯಾವ ರೀತಿಯಲ್ಲಿ ಲೆಕ್ಕಾಚಾರ ಮಾಡಿ ಕಾರ್ಯಗತವಾಗಿ ತರಬೇಕು ಎಂಬುದರ ಬಗ್ಗೆ ಚಿಂತಿಸಲಾಗುತ್ತಿದೆ. ಅಲ್ಲದೇ ದೇಶದ್ಯಾಂತ 39,000 ಕೋಟಿ ರೂಪಾಯಿಗಳನ್ನು ವೆಚ್ಚಮಾಡಿ ಹೊಸದಾಗಿ 11 ಕಾಮಗಾರಿಗಳನ್ನು ಆರಂಭಿಸಿದೆ. ಆರು ತಿಂಗಳಲ್ಲಿ ಸಾವಿರ ಕೋಟಿಗೂ ಹೆಚ್ಚು ಅನುದಾನಗಳು ಬಿಡುಗಡೆಯಾಗಿದ್ದು, ರೈಲ್ವೆ ಮಾರ್ಗಗಳಲ್ಲಿ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ಕಾಮಗಾರಿಗಳು ಕಾರ್ಯಗತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳಲ್ಲಿ ಕಾರಣಾಂತರಗಳಿಂದ ವಿಳಂಬವಾಗಿ ಸ್ಥಗಿತಗೊಂಡಿರುವ ಕಾರಣ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಈ ಮಾಹಿತಿಯ ಆಧಾರದ ಮೇಲೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

 

Tags:
error: Content is protected !!