ತಿಪಟೂರು: ರಾಜ್ಯ ರೈಲ್ವೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 7,750 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಇಂದು ಕೆ.ಎಸ್.ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನ ಶತಾಬ್ದಿ ಎಕ್ಸ್‌ಪ್ರೆಸ್ ಹಾಗೂ ಕೆ.ಎಸ್.ಆರ್ ಬೆಂಗಳೂರು-ಎಸ್.ಎಸ್.ಎಸ್. ಹುಬ್ಬಳ್ಳಿ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲುಗಳಿಗೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿ ಮಾತನಾಡಿದರು.
ದೇಶದಲ್ಲಿ ಅಧಿಕಾರದಲ್ಲಿದ್ದ ಹಿಂದಿನ ಯುಪಿಎ ಸರ್ಕಾರ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಕೇವಲ 830 ಕೋಟಿ ರೂಪಾಯಿಗಳನ್ನು ಅನುದಾನ ನೀಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ 7,750 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿ ರೈಲ್ವೆ ಅಭಿವೃದ್ಧಿಗೆ ಪ್ರೋತ್ಸಾಹ ನೀಡುತ್ತಿದೆ.
ದೇಶದಲ್ಲಿರುವ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಅನುದಾನವನ್ನು ಯಾವ ರೀತಿಯಲ್ಲಿ ಲೆಕ್ಕಾಚಾರ ಮಾಡಿ ಕಾರ್ಯಗತವಾಗಿ ತರಬೇಕು ಎಂಬುದರ ಬಗ್ಗೆ ಚಿಂತಿಸಲಾಗುತ್ತಿದೆ. ಅಲ್ಲದೇ ದೇಶದ್ಯಾಂತ 39,000 ಕೋಟಿ ರೂಪಾಯಿಗಳನ್ನು ವೆಚ್ಚಮಾಡಿ ಹೊಸದಾಗಿ 11 ಕಾಮಗಾರಿಗಳನ್ನು ಆರಂಭಿಸಿದೆ. ಆರು ತಿಂಗಳಲ್ಲಿ ಸಾವಿರ ಕೋಟಿಗೂ ಹೆಚ್ಚು ಅನುದಾನಗಳು ಬಿಡುಗಡೆಯಾಗಿದ್ದು, ರೈಲ್ವೆ ಮಾರ್ಗಗಳಲ್ಲಿ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳ ಕಾಮಗಾರಿಗಳು ಕಾರ್ಯಗತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳಲ್ಲಿ ಕಾರಣಾಂತರಗಳಿಂದ ವಿಳಂಬವಾಗಿ ಸ್ಥಗಿತಗೊಂಡಿರುವ ಕಾರಣ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಈ ಮಾಹಿತಿಯ ಆಧಾರದ ಮೇಲೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ತ್ವರಿತಗತಿಯಲ್ಲಿ ಮುಕ್ತಾಯಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…