ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆಗೆ ರಚಿಸಲಾಗಿರುವ ಏಳನೇ ರಾಜ್ಯ ವೇತನ ಆಯೋಗಕ್ಕೆ ವಿವಿಧ ಸಂಘ-ಸಂಸ್ಥೆಗಳು, ಇಲಾಖೆಗಳು ನೀಡಬಹುದಾದ ಸಲಹೆಯನ್ನು ಫೆ.10ರೊಳಗೆ ಸಲ್ಲಿಸಬಹುದು.
ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾ ಅಂಶಗಳಿಗೆ ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯುವ ಉದ್ದೇಶದಿಂದ ವಿವಿಧ ಪ್ರಶ್ನಾವಳಿಗಳನ್ನು ಜ.17ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.
ಈ ಪ್ರಶ್ನಾವಳಿಗಳು ಆಯೋಗದ ವೆಬ್ಸೈಟ್ ಲಭ್ಯವಿದ್ದು, ಪ್ರಶ್ನಾವಳಿಗಳಿಗೆ ಉತ್ತರ ಹಾಗೂ ಸಲಹೆಗಳನ್ನು ಫೆ.10ರೊಳಗೆ ಸಲ್ಲಿಸಲು ಕೋರಲಾಗಿದೆ ಎಂದು ಅಕೃತ ಪ್ರಕಟಣೆ ತಿಳಿಸಿದೆ. ರಾಜ್ಯ ಸರ್ಕಾರವು, ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳ ನೌಕರರು ಹಾಗೂ ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳ ವೇತನ, ತುಟ್ಟಿಭತ್ಯೆ ಮತ್ತು ಇತರೆ ಸೌಲಭ್ಯಗಳ ಬಗ್ಗೆ ಪರಿಶೀಲಿಸಿ ಪರಿಷ್ಕರಿಸಿ ಸರ್ಕಾರಕ್ಕೆ ವರದಿ ನೀಡಲು 7ನೇ ವೇತನ ಆಯೋಗವನ್ನು ರಚಿಸಲಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಮೈಸೂರು : ನೂತನವಾಗಿ ಎಸ್ಪಿ ಜನಸಂಪರ್ಕ ಸಭೆ
Next Article ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ