Mysore
22
moderate rain

Social Media

ಬುಧವಾರ, 30 ಸೆಪ್ಟೆಂಬರ್ 2026
Light
Dark

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.

ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು ಭಯ ಹುಟ್ಟಿಸಿದೆ.

ಫೆಬ್ರವರಿ ತಿಂಗಳಿನಲ್ಲಿ ಕಂಡುಬರುತ್ತಿದ್ದ ಸೋಂಕು ಈಗ ಡಿಸೆಂಬರ್‌ ತಿಂಗಳಿನಲ್ಲೇ ಕಾಣಿಸಿಕೊಂಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.

ಇದನ್ನು ಓದಿ : ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಕಾಡಂಚಿನ ಪ್ರದೇಶಗಳಲ್ಲಿ ದುಡಿಮೆಗಾಗಿ ತೆರಳುವ ಗ್ರಾಮಸ್ಥರು ಕಡ್ಡಾಯವಾಗಿ ಡಂಪ್‌ ಎಣ್ಣೆ ಮೈಯಿಗೆ ಲೇಪಿಸಿಕೊಳ್ಳುವ ಮೂಲಕ, ಉಣ್ಣೆಗಳಿಂದ ರಕ್ಷಣೆ ಪಡೆಯುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಜನರ ಮೇಲೆ ನಿಗಾ ವಹಿಸಿದ್ದಾರೆ.

Tags:
error: Content is protected !!