ರಾಜ್ಯ

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ.

ಈ ಬಗ್ಗೆ ವಿಧಾನಪರಿಷತ್‌ನಲ್ಲಿ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದು, ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.

ಇದನ್ನು ಓದಿ: ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಗೃಹ ಸಚಿವರು ಅಂಕಿ-ಅಂಶಗಳ ಸಮೇತ ವಿವರಿಸುತ್ತಿದ್ದಂತೆ ಶಾಸಕರ ಶರವಣ ಆತಂಕ ವ್ಯಕ್ತಪಡಿಸಿದ್ದು, ಇದು ಬೇಲಿಯೇ ಎದ್ದು ಹೊಸ ಮೇಯ್ದ ಕಥೆಯಾಗಿದೆ. ರಕ್ಷಕರೇ ಭಕ್ಷಕರಾಗುತ್ತಿದ್ದಂತೆ ಇದೆ. ಈ ರೀತಿಯಾದರೆ ಪೊಲೀಸರ ಮೇಳೆ ಜನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ಕೇವಲ ಸಸ್ಪೆಂಡ್‌ ಮಾಡಿದರೆ ಸಾಲದು ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್‌ ಅವರು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago