Mysore
26
few clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6 ಕೋಟಿ ಮೌಲ್ಯದ 9 ಕೆ.ಜಿ ಚಿನ್ನ ವಶ

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್‌ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್‌ 4 ರ ಬೆಳಿಗ್ಗೆ ಕಾರ್ಯಚರಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಜೂನ್‌ 4 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್‌ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್‌ಬ್ಯಾಗ್‌ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್‌ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:
error: Content is protected !!