ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 6 ಕೋಟಿ ಮೌಲ್ಯದ 9 ಕೆ.ಜಿ ಚಿನ್ನ ವಶ

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್‌ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್‌ 4 ರ ಬೆಳಿಗ್ಗೆ ಕಾರ್ಯಚರಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಜೂನ್‌ 4 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್‌ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್‌ಬ್ಯಾಗ್‌ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್‌ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

26 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

3 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago