A closeup shot of a pile of shiny gold coins and bars
ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.29 ಕೋಟಿ ಮೌಲ್ಯದ 9 ಕೆ.ಜಿ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಗುರುವಾರ(ಜೂ.6) ಮಾಹಿತಿ ನೀಡಿದ ಡಿಆರ್‌ಐ ಅಧಿಕಾರಿಗಳು ಮಂಗಳವಾರ ಅಂದರೆ ಜೂನ್ 4 ರ ಬೆಳಿಗ್ಗೆ ಕಾರ್ಯಚರಣೆ ನಡೆಸುತ್ತಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಜೂನ್ 4 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್ ಏರ್‌ವೇಸ್ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.
ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್‌ಬ್ಯಾಗ್‌ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.
ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…