Mysore
27
broken clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಕರ್ನಾಟಕದ 9 ಮಂದಿಗೆ ದೇಶದ ಅತ್ತ್ಯುನ್ನತ ಗೌರವ ಪ್ರಶಸ್ತಿ

ನವದೆಹಲಿ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ನಾಗರಿಕ ಸೇವಾ ಪದ್ಮ ಪ್ರಶಸ್ತಿ ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ ಮಾಡಿದೆ. ಸಾಹಿತ್ಯ, ಶಿಕ್ಷಣ, ಕಲೆ, ವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಕರ್ನಾಟಕದ 9 ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತದ ಪದ್ಮ ಪುರಸ್ಕಾರಗಳಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಕಲಾ ವಿಭಾಗದಲ್ಲಿ ಸಾಧನೆ ಮಾಡಿದ ಲಕ್ಷ್ಮೀ ನಾರಾಯಣ ಸುಬ್ರಹ್ಮಣ್ಯ ಅವರು ಭಾಜನರಾಗಿದ್ದಾರೆ.

ರಾಜ್ಯ ಇಬ್ಬರಿಗೆ ಪದ್ಮ ಭೂಷಣ ಪ್ರಶಸ್ತಿ ಲಭಿಸಿದ್ದು, ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಆನಂತ್‌ನಾಗ್‌ ಹಾಗೂ ಹಿರಿಯ ಪತ್ರಕರ್ತ ಎ. ಸೂರ್ಯಪ್ರಕಾಶ್‌ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

6 ಮಂದಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ. ಚಿತ್ರ ನಟ ಹಾಗೂ ನಿರ್ಮಾಪಕದ ರಘು ಹಾಸನ್‌, ಸಂಗೀತ ನಿರ್ದೇಶಕ ರಿಕಿ ಕೇಜ್‌, ಉದ್ಯಮಿ ಪ್ರಶಾಂತ್‌ ಪ್ರಕಾಶ್‌, ವೈದ್ಯೆ ಡಾ. ವಿಜಯಲಕ್ಷ್ಮಿ ದೇಶಮಾನೆ, ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ್‌, ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ ಇವರುಗಳಿಗೆ ಪ್ರಶಸ್ತಿ ಲಭಿಸಿದೆ.

Tags:
error: Content is protected !!