ಬೆಂಗಳೂರು: ರಾಜ್ಯದ ಕೆಎಸ್‌ಆರ್‌ಟಿಸಿ ಸಾರಿಗೆ ಸಂಸ್ಥೆಗೆ 9 ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಲಭಿಸಿದೆ.
6 ಆಡ್‌ವರ್ಲ್ಡ್ ಶೊಡೌನ್, ಚಿನ್ನದ ಪ್ರಶಸ್ತಿ, 2 ಗ್ರೊವ್ ಕೇರ್ ಇಂಡಿಯಾ ಹಾಗೂ 1 ಪಿಆರ್‌ಎಸ್‌ಐ ರಾಷ್ಟ್ರೀಯ ಪ್ರಶಸ್ತಿ 2024 ಸಿಕ್ಕಿದೆ.
6 ಆಡ್‌ವರ್ಲ್ಡ್ ಶೊಡೌನ್
1. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ ಪರಿಚಯ-ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಉಪಕ್ರಮ
2. ಅಂಬಾರಿ ಉತ್ಸವ ಬಸ್ ಅತ್ಯುತ್ತಮ ಬ್ರಾಂಡ್ ಅನುಭವ
3. ಅಶ್ವಮೇಧ ಕ್ಲಾಸಿಕ್ ಬಸ್ಸುಗಳ-ಅತ್ಯುತ್ತಮ ಕಾರ್ಪೊರೇಟ್ ಸಂವಹನ ಹಾಗೂ ನಿರ್ವಹಣೆ
4.ಪಲ್ಲಕ್ಕಿ ಬಸ್ಸುಗಳ- ಅತ್ಯುತ್ತಮ ಗ್ರಾಹಕ ಸ್ವೀಕೃತ
5.ಪ್ರತಿಷ್ಠಿತ ಬಸ್ಸು ಸೇವೆಗಳ ಬ್ರಾಂಡಿಂಗ್- ಅತ್ಯುತ್ತಮ ಸಾರ್ವಜನಿಕ ಸಂಪರ್ಕ
6. ಅಶ್ವಮೇಧ ಕ್ಲಾಸಿಕ್ ಬಸ್ಸುಗಳು-ವರ್ಷದ ಅತ್ಯುತ್ತಮ ಬ್ರ್ಯಾಂಡ್
ನಿಗಮವು ಅತ್ಯುತ್ತಮ ಪರಿಸರ ನಿರ್ವಹಣೆ ಹಾಗೂ ವಿನೂತನ ಮಾನವ ಸಂಪನ್ಮೂಲ ಯೋಜನೆಗಳು ಅನುಷ್ಟಾನಕ್ಕಾಗಿ ಗ್ರೋ ಕೇರ್ ಇಂಡಿಯಾ ಪ್ರಶಸ್ತಿ ಎರಡು ವಿಭಾಗದಲ್ಲಿ ಪಡೆದಿದೆ. ಪಿಆರ್ಎಸ್‌ಐ ರಾಷ್ಟ್ರೀಯ ಪ್ರಶಸ್ತಿಯನ್ನು ನಿಗಮಕ್ಕೆ ಕಾರ್ಪೋರೇಟ್ ಚಿತ್ರ ವಿಭಾಗದಲ್ಲಿ ಲಭಿಸಿರುತ್ತದೆ.
ನಿಗಮಕ್ಕೆ ಆಡ್‌ವರ್ಲ್ಡ್ ಪ್ರಶಸ್ತಿಗಳನ್ನು ಹೊಸದಿಲ್ಲಿಯ ಗ್ರೋ ಕೇರ್ ಇಂಡಿಯಾ ಪ್ರಶಸ್ತಿಗಳನ್ನು ಗೋವಾದಲ್ಲಿ ಹಾಗೂ ಪಿಆರ್‌ಎಸ್‌ಐ ಪ್ರಶಸ್ತಿಯನ್ನು ರಾಯಪುರದಲ್ಲಿ ಪ್ರದಾನ ಮಾಡಲಾಯಿತು.