ರಾಜ್ಯ

ಕೆಪಿಟಿಸಿಎಲ್‌ನಲ್ಲಿ 902 ಹುದ್ದೆಗಳ ನೇಮಕಕ್ಕೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.

ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.

ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ.

ಕೋಟ್‌:
“ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್‌ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು”.
– ಕೆ.ಜೆ ಜಾರ್ಜ್‌, ಇಂಧನ ಸಚಿವ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 15, ಸೋಮವಾರ  

28 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ರಾಜ್ಯ ಕಾಂಗ್ರೆಸ್‌ನ ಗೊಂದಲ, ವರಿಷ್ಠರ ಪ್ಲಾನ್ ವಿಫಲ

ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್…

2 hours ago

ಮದ್ಯವ್ಯಸನಕ್ಕೆ ಸಿಲುಕಿದ ಆದಿವಾಸಿಗಳು ; ಆಡಳಿತ ವರ್ಗ ಅರಿವು ಮೂಡಿಸಲಿ

ಚಾಮರಾಜಗರ ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳವಾದ ಮೇಲೆ ಮಹದೇಶ್ವರ ಬೆಟ್ಟದ ಅಸುಪಾಸಿನಲ್ಲಿ ವಾಸಿಸುವ ಒಡಕಟ್ಟು ಜನರು ಮದ್ಯವ್ಯಸನಿಗಳಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ…

2 hours ago

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

15 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

16 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

16 hours ago