ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ.
ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ.
ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು.
ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮವಹಿಸಲಾಗುವುದು. ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್ ಪ್ರಕಟಣೆ ತಿಳಿಸಿದೆ.
ಕೋಟ್:
“ರಾಜ್ಯಾದ್ಯಂತ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ವಿದ್ಯುತ್ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು”.
– ಕೆ.ಜೆ ಜಾರ್ಜ್, ಇಂಧನ ಸಚಿವ
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…