ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕಾಡಾನೆ ದಾಳಿಯಿಂದ 97 ಮಂದಿ ಮೃತಪಟ್ಟಿದ್ದು ಅವರ ಕುಟುಂಬದವರಿಗೆ ಪರಿಹಾರ ಪಾವತಿ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ನೂತನ ತಂತ್ರಜ್ಞಾನ ಬಳಸಿ ನಿರಂತರ ಕ್ರಮ ಕೈಗೊಳ್ಳುತ್ತಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು, ಆನೆ, ಮಂಗ, ನವಿಲು ಸೇರಿದಂತೆ ವನ್ಯಜೀವಿಗಳಿಂದ ರೈತರಿಗೆ ಸಮಸ್ಯೆಯಾಗುತ್ತಿದೆ. ಕೃಷಿ ಬೆಳೆಗಳು ನಾಶವಾಗುತ್ತಿವೆ ಇವರದ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದರು.
ಇದಕ್ಕೆ ಉತ್ತರ ನೀಡಿದ ಸಚಿವರು, ಆನೆ ಕಾರ್ಯಪಡೆ, ಚಿರತೆ ಕಾರ್ಯಪಡೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಕಾಡಾನೆ ನಿರ್ವಹಣೆಗಾಗಿ ಕ್ಷೀಪ್ರ ಕಾರ್ಯಾಚರಣೆ ನಡಸಲಾಗುತ್ತಿದೆ ಎಂದರು.
ಆನೆಗಳು ಜನವಸತಿ ಪ್ರದೇಶಕ್ಕೆ ಬರುವ ಸಮಯದಲ್ಲಿ ತಕ್ಷಣ ಮಾಹಿತಿ ನೀಡಲಾಗುತ್ತಿದೆ. ಕಾಡಿನಂಚಿನಲ್ಲಿ ಎಐ ಆಧಾರಿತ ಕ್ಯಾಮೆರಾಗಳ್ನು ಅಳವಡಿಸಲಾಗಿದೆ. ವನ್ಯಜೀವಿಗಳ ಚಲನವಲನ ಮೇಲೆ ಗಮನಡಲಾಗಿದೆ ಎಂದು ಸಭೆಗೆ ತಿಳಿಸಿದರು.
ದೇಶದಲ್ಲೇ ಕರ್ನಾಟಕದಲ್ಲೇ ಅತಿ ಹೆಚ್ಚು ಆನೆಗಳಿದ್ದು, 2020ರ ಜನಗಣತಿ ಪ್ರಕಾರ 6395 ಆನೆಗಳನ್ನು ಗುರುತಿಸಲಾಗಿದೆ, 543 ಹುಲಿಗಳಿವೆ. 380 ರೈಲ್ವೇ ಬ್ಯಾರಿಕೇಡ್ ಬಳಸಿ ಕಾಡಂಚಿನಲ್ಲಿ 428 ಕಿ.ಮೀ ತಡೆಗೋಡೆ ನಿರ್ಮಿಸಲಾಗಿದೆ. ಇನ್ನೂ 105 ಕಿ.ಮೀಗೆ 150 ಕೋಟಿ ಹೆಚ್ಚುವರಿ ಅನುದಾನಕ್ಕೆ ಪ್ತಸ್ತಾವನೆ ಸಲ್ಲಿಸಲಾಗಿದೆ. ಮತ್ತಷ್ಟು ಆನೆ ಬ್ಯಾರಿಕೇಡ್ ಬೇಲಿ ನಿರ್ಮಾಣಕ್ಕೆ ಬೇಡಿಕೆ ಇದ್ದು, 2 ವರ್ಷದಲ್ಲಿ ಹೆಚ್ಚುವಾರಿಯಾಗಿ 500 ಕೋಟಿ ರೂ. ವೆಚ್ಚದಲ್ಲಿ 300 ಕಿ.ಮೀ ಬ್ಯಾರಿಕೇಡ್ ನಿರ್ಮಿಸುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.





