ರಾಜ್ಯ

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣಕ್ಕೆ ಬ್ರೇಕ್‌ : ಮುಂದಿನ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ನಕಲಿ ಸುದ್ದಿ, ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಅಧಿವೇಶನದಲ್ಲಿ ಕಾಯಿದೆಯನ್ನು ಜಾರಿಗೊಳಿಸಲು ಸರ್ಕಾರ ಸಿದ್ದತೆ ನಡೆಸಿದೆ ಎನ್ನಲಾಗಿದೆ.

ಈ ಪೈಕಿ ಕೆಲವು ಕಾಯಿದೆಗಳು ವಿಪಕ್ಷ ಬಿಜೆಪಿಯನ್ನು ಸೈದ್ಧಾಂತಿಕವಾಗಿ ನಿಯಂತ್ರಿಸುವ ಉದ್ದೇಶ ಹೊಂದಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಬಳಿಕ ದ್ವೇಷ ಭಾಷಣ, ಸುಳ್ಳು ಸುದ್ದಿ ನಿಯಂತ್ರಣ ಕಾಯಿದೆ ಜಾರಿಗೊಳಿಸಬೇಕೆಂಬ ಆಗ್ರಹ ವ್ಯಕ್ತವಾಗಿತ್ತು. ಕಾಂಗ್ರೆಸ್ ಶಾಸಕರು ಹಾಗೂ ಬೆಂಬಲಿಗರು ಈ ಬಗ್ಗೆ ಒತ್ತಾಯಿಸಿದ್ದರು. ಅಗತ್ಯ ಬಿದ್ದರೆ ದ್ವೇಷ ಭಾಷಣ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.

ದ್ವೇಷ ಭಾಷಣ ಸಾಬೀತಾದರೆ 3 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ನಗದು ದಂಡ ವಿಧಿಸಲು ಅವಕಾಶ ಮಾಡಿಕೊಡುವಂಥ ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ-205 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸುತ್ತಿದೆ. ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗುತ್ತಿದೆ.

ಇದರಡಿ ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನು ಕರಡಿನಲ್ಲಿ ಪ್ರಸ್ತಾಪಿಸಲಾಗಿದೆ. ಈಗಾಗಲೇ ಭಾರತೀಯ ನಾಗರಿಕ ದಂಡ ಸಂಹಿತೆಯಲ್ಲಿ ದ್ವೇಷ ಭಾಷಣ ನಿಷಿದ್ಧವಾದರೂ ಇದಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಲು ವಿಸ್ಕೃತವಾಗಿ ಕರಡು ಸಿದ್ಧಪಡಿಸಲಾಗಿದೆ ಎಂದು ಕಾನೂನು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 2023 ರಿಂದ 2024 ವರೆಗೆ ರಾಜ್ಯದಲ್ಲಿ ಒಟ್ಟು 247 ಸುಳ್ಳು ಸುದ್ದಿ ಪ್ರಕರಣ ವರದಿಯಾಗಿವೆ. ಇವುಗಳನ್ನು ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಸೆಲ್‌ಗಳನ್ನು ತೆರೆಯಲಾಗಿದೆ. ಇದರ ಮೂಲಕ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಗುಪ್ತ ಮಾಹಿತಿ ಸಿಬ್ಬಂದಿ ಹಾಗೂ ಬೀಟ್ ಸಿಬ್ಬಂದಿ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸದ್ಯ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡುವಲ್ಲಿ ವ್ಯಕ್ತಿ ತಪ್ಪಿತಸ್ಥರೆಂದು ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸುವ ಬಗ್ಗೆ ರೂಪರೇಷ ಸಿದ್ಧವಾಗಿದೆ .ಅದೇನೇ ಇರಲಿ ಇತ್ತೀಚಿನ ದಿನಗಳಲ್ಲಿ ತಪ್ಪು ಸುದ್ದಿಗಳ ಹಾವಳಿ ಕೂಡ ಹೆಚ್ಚಾಗಿದ್ದು, ಜನರಿಗೆ ಯಾವುದು ಸತ್ಯ ಸುಳ್ಳು ಎನ್ನುವ ಗೊಂದಲವೂ ಕೂಡ ಹೆಚ್ಚಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಅಥವಾ ಪ್ರಕಟಣೆಗಳಲ್ಲಿ ತಪ್ಪು ಮಾಹಿತಿ ನೀಡಿದರೆ ಎರಡರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ. ಈ ಅಪರಾಧಗಳನ್ನು ಸಂಜ್ಞೇಯವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇದು ಜಾಮೀನು ರಹಿತ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ಹಾಗೂ ದ್ವೇಷ ಭಾಷಣ ಮಾಡುವವರು ಎಚ್ಚರಿಕೆಯಿಂದ ಇರಬೇಕು.

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

11 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

1 hour ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

1 hour ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

3 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

3 hours ago