ರಾಜ್ಯ

ಸ್ಯಾಟಲೈಟ್‌ ಪೋನ್‌ನಿಂದ ಪಾಕ್‌ಗೆ ಕರೆ: ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಫೋನ್!

ಯಾದಗಿರಿ: ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸೆಪ್ಟೆಂಬರ್ 17ರಂದು ನಸುಕಿನ ಜಾವ 3ಗಂಟೆ ಸುಮಾರಿಗೆ ಸ್ಯಾಟಲೈಟ್ ಫೋನ್ ನಿಂದ ಕರೆ ಹೋಗಿದೆ. ಶೆಳ್ಳಗಿ ಗ್ರಾಮದಿಂದ ಪಾಕಿಸ್ತಾನಕ್ಕೆ ಕರೆ ಹೋಗಿದೆ ಎಂದು ಶಂಕಿಸಲಾಗಿದೆ.

ಜಿಪಿಎಸ್ ಲೊಕೇಷನ್ ಆಧಾರದ ಮೇಲೆ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚೀನಾ ನಿರ್ಮಿತ ಸ್ಯಾಟಲೈಟ್ ಫೋನ್ ನಿಂದ ಪಾಕಿಸ್ತಾನಕ್ಕೆ ಕರೆ ಹೋಗಿರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಯಾದಗಿರಿಯ ಹೆಡಗಿಮುದ್ರ ಗ್ರಾಮದಿಂದ ಸ್ಯಾಟಲೈಟ್ ಕರೆ ಹೋಗಿತ್ತು. ಈಗ ಮತ್ತೆ ಪಾಕಿಸ್ತಾನಕ್ಕೆ ಕರೆ ಹೋಗಿರುವ ಅನುಮಾನ ವ್ಯಕ್ತವಾಗಿದೆ.

andolanait

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

19 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

19 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

20 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

20 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

20 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

20 hours ago