ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಲರ್ಟ್ ಆಗಿದ್ದಾರೆ.
ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಚುನಾವಣೆ ನಡೆದರೆ ನಾವು ರೆಡಿ. ನಮ್ಮ ಪರ ಒಬ್ಬರನ್ನು ಅಭ್ಯರ್ಥಿ ಮಾಡಲು ಚಿಂತನೆ ನಡೆದಿದೆ. ನಮ್ಮ ಗುಂಪಿನಿಂದ ಈಗಾಗಲೇ ನಿರ್ಣಯ ಮಾಡಿದ್ದೇವೆ. ನಾನು ನಿಲ್ಲುತ್ತೇನೋ ಅಥವಾ ಯಾರು ನಿಲ್ಲುತ್ತಾರೆ ನೋಡೋಣ ಎಂದರು.
ಇನ್ನು ಕಲುಷಿತ ವ್ಯಕ್ತಿಗಳಿಂದ ಬಿಜೆಪಿಯನ್ನು ದೂರವಿಡಲು ನಿರ್ಣಯ ಮಾಡಲಾಗಿದೆ ಎಂದ ಯತ್ನಾಳ್, ವಿಜಯೇಂದ್ರ ಜಿಲ್ಲಾ ಅಧ್ಯಕ್ಷರ ಮೇಲೆ ಒತ್ತಡ ಹಾಕಬಾರದು ಎಂದರು.
ನನಗೆ ಮತ ಹಾಕುವಂತೆ ಜಿಲ್ಲಾ ಅಧ್ಯಕ್ಷರ ಮೇಲೆ ವಿಜಯೇಂದ್ರ ಒತ್ತಡ ಹಾಕುತ್ತಿದ್ದಾರೆ. ಹೈಕಮಾಂಡ್ ಇದನ್ನು ಗಮನಿಸಬೇಖು. ಯಾರೂ ಹಸ್ತಕ್ಷೇಪ ಮಾಡದಂತೆ ನೋಡಿಕೊಳ್ಳಬೇಕು. ಯಾರ ಪರವಾಗಿ ಇಲ್ಲದವರನ್ನು ಜಿಲ್ಲೆಗಳಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.
ಇನ್ನು ರಮೇಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ ಯತ್ನಾಳ್ ಅವರು, ಯಡಿಯೂರಪ್ಪ ಸಿಎಂ ಆಗಲು ರಮೇಶ್ ಜಾರಕಿಹೊಳಿ ಕಾರಣ. ಅವರನ್ನು ಜಾಲದಲ್ಲಿ ಸಿಕ್ಕಿಹಾಕಿಸಿದ್ದು ಯಾರು ಎಂದು ಎಲ್ಲರಿಗೂ ಗೊತ್ತಿದೆ. ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಎಂದು ಹೇಳಿದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…