ಬೆಂಗಳೂರು: ಕಡಿಮೆ ವೆಚ್ಚ, ಕಡಿಮೆ ನೀರಿನಲ್ಲಿಯೂ ಬೆಳೆಯಬಹುದಾದ ಸಿರಿಧಾನ್ಯಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದ್ದು, ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಇದು ರೈತರಿಗೂ ಆರ್ಥಿಕವಾಗಿ ಅನುಕೂಲವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯದ ಬಗ್ಗೆ ಆಸಕ್ತಿ ಕಡಿಯಾಗಿತ್ತು. ಈಗ 4-5 ವರ್ಷಗಳಿಂದ ಸಾರ್ವಜನಿಕರಿಗೆ ಈ ಬಗ್ಗೆ ಆಸಕ್ತಿ ಇದ್ದು, ಸಾರ್ವಜನಿಕರ ಆಸಕ್ತಿಗೆ ಸರ್ಕಾರ ಜವಾಬ್ದಾರಿಯುತವಾಗಿ ಸ್ಪಂಧಿಸುವ ನಿಟ್ಟಿನಲ್ಲಿ ಇದಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಾರುಕಟ್ಟೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ ಎಂದರು.
ಸಿರಿಧಾನ್ಯ ಬೆಳೆಯಲು ರೈತಸಿರಿ ಕಾರ್ಯಕ್ರಮದ ಮೂಲಕ ಹೆಕ್ಟೆರ್‌ಗೆ 1೦ ಸಾವಿರ ರೂ ನೀಡಿ ಪ್ರೋತ್ಸಾಹ ನೀಡಿದ್ದರಿಂದ ಸಿರಿಧಾನ್ಯದ ಉತ್ಪತ್ತಿ ಮಾಡಲು ರೈತರು ಉತ್ಸುಕರಾಗಿದ್ದಾರೆ. ಇದುವರೆಗೆ 104 ಕೋಟಿ ರೂ ವಿತರಣೆ ಮಾಡಲಾಗಿದೆ ಎಂದು ಹೇಳಿದರು.
ಸಿರಿಧಾನ್ಯ ಮೇಳದ ಮೂಲಕ ರೈತರ ಸಿರಿಧಾನ್ಯಗಳಿಗೆ ಮಾರುಕಟ್ಟೆ ದೊರೆಕಿಸಿಕೊಡುತ್ತಿದ್ದು, ಮೇಳದ ಮೂಲಕ ಆಹಾರ ಉತ್ಪನ್ನ ತಯಾರಿಸಿ ವಿತರಿಸುವ ಕೆಲಸ ಮಾಡಲಾಗುತ್ತಿದೆ. ನನ್ನ ನೇತೃತ್ವದಲ್ಲಿ ಎರಡು ವರ್ಷಗಳ ಕಾಲ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಮಾಡಲಾಗುತ್ತಿದೆ ಎಂದರು.
ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್…
ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ…
ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್ ಬಳಸಲು ಅವಕಾಶವಿದೆ.…
ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…