ಹಸಿರು ಪಟಾಕಿಯನ್ನಷ್ಟೇ ಸಿಡಿಸಿ: ಈಶ್ವರ ಖಂಡ್ರೆ
ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.
ಹಸಿರು ಪಟಾಕಿ ಮಾತ್ರವೇ ಬಳಸಿ:
ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
125 ಡೆಸಿಬಲ್ ಗಿಂತ ಕಡಿಮೆ ಶಬ್ದದ ಪಟಾಕಿಗೆ ಮಾತ್ರ ಅವಕಾಶ:
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:
ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.
ಜಾಗೃತಿ ಮೂಡಿಸಲು ಮನವಿ:
ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ.
ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…