Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ನಿಖಿಲ್‌ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ.

ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ ಭಾರೀ ಮತಗಳ ಅಂತರದಿಂದ ಸೋಲನ್ನನುಭವಿಸಿದರು.

ಈ ಹಿನ್ನೆಲೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಸಮಾಧಾನ ಮಾಡುವ ಸಲುವಾಗಿ ಕಡೂರು ಮೂಲದ ಹರ್ಷಿತ್‌ ಎಂಬುವವರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ನೀವು ಸೋತಿರಬಹುದು ಆದರೆ ಜನರ ಮನಸ್ಸಿನಲ್ಲಿದ್ದೀರಿ. ನಿಷ್ಠಾವಂತ ಕಾರ್ಯಕರ್ತರಲ್ಲಿ ಜೆಡಿಎಸ್‌ ಉಸಿರಿದೆ. ಮುಂದಿನ ದಿನಗಳಲ್ಲಿ ಒಳ್ಳೆಯತನ ಗೆದ್ದೇ ಗೆಲ್ಲುತ್ತೆ. ನೀವು ಎದೆಗುಂದಲೇ ಪಕ್ಷದಲ್ಲಿ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗುತ್ತೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: