ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿಗೆ ಅಭಿಮಾನಿಯೊಬ್ಬರು ರಕ್ತದಿಂದ ಪತ್ರ ಬರೆದು ಸಮಾಧಾನ ಹೇಳಿದ್ದಾರೆ.
ರಾಜ್ಯದಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಭಾರೀ ಮತಗಳ ಅಂತರದಿಂದ ಸೋಲನ್ನನುಭವಿಸಿದರು.
ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸಮಾಧಾನ ಮಾಡುವ ಸಲುವಾಗಿ ಕಡೂರು ಮೂಲದ ಹರ್ಷಿತ್ ಎಂಬುವವರು ರಕ್ತದಲ್ಲಿ ಪತ್ರ ಬರೆದಿದ್ದಾರೆ. ನೀವು ಸೋತಿರಬಹುದು ಆದರೆ ಜನರ ಮನಸ್ಸಿನಲ್ಲಿದ್ದೀರಿ. ನಿಷ್ಠಾವಂತ ಕಾರ್ಯಕರ್ತರಲ್ಲಿ ಜೆಡಿಎಸ್ ಉಸಿರಿದೆ. ಮುಂದಿನ ದಿನಗಳಲ್ಲಿ ಒಳ್ಳೆಯತನ ಗೆದ್ದೇ ಗೆಲ್ಲುತ್ತೆ. ನೀವು ಎದೆಗುಂದಲೇ ಪಕ್ಷದಲ್ಲಿ ಕೆಲಸ ಮಾಡಿ. ಮುಂದಿನ ದಿನಗಳಲ್ಲಿ ಒಳ್ಳೆಯ ಅವಕಾಶ ಸಿಗುತ್ತೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…