Mysore
33
clear sky

Social Media

ಗುರುವಾರ, 26 ಮಾರ್ಚ್ 2026
Light
Dark

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ ಕಾಣಿಸಿಕೊಂಡಿವೆ.

ತಮಿಳುನಾಡು ಅರಣ್ಯದಿಂದ ಬನ್ನೇರುಘಟ್ಟ ವನ್ಯಜೀವಿ ವಲಯಕ್ಕೆ ಬಂದಿರುವ 40 ಕಾಡಾನೆಗಳು ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಕಾಡಾನೆ ಹಿಂಡನ್ನು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟೊಟ್ಟಿಗೆ 40 ಕಾಡಾನೆಗಳು ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ.

Tags:
error: Content is protected !!