Mysore
25
clear sky

Social Media

ಗುರುವಾರ, 29 ಜನವರಿ 2026
Light
Dark

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಕಲಚೇತನರನ್ನು ತಾಂತ್ರಿಕ ಜ್ಞಾನದೊಂದಿಗೆ ಆರ್ಥಿಕತೆಯಲ್ಲಿ ಮುನ್ನಡೆಸುವ ಉದ್ದೇಶದಿಂದ ಮಾರುಕಟ್ಟೆ ಬೇಡಿಕೆಗೆ ಅನುಗುಣವಾದ ವೃತ್ತಿ ತರಬೇತಿ ಮೂಲಕ ಒಂದು ಸಾವಿರ ಅಭ್ಯರ್ಥಿಗಳಿಗೆ 3 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ತರಬೇತಿಯ ಜೊತೆಗೆ ಟೂಲ್‍ಕಿಟ್ ವಿತರಣೆ ಹಾಗೂ ಉದ್ಯೋಗಾವಕಾಶವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರದಿಂದ ಉದ್ಯಮಶೀಲತಾಭಿವೃದ್ಧಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿಕಲಚೇತನರಿಗೆ ಸರ್ಕಾರದ ಆದೇಶದ ಅನ್ವಯ ಶೇ.3ರಷ್ಟಿದ್ದ ಮೀಸಲಾತಿ ಪ್ರಮಾಣವನ್ನು ಶೇ.5ಕ್ಕೆ ಹೆಚ್ಚಿಸಿ ತರಬೇತಿ ಕಾರ್ಯಕ್ರಮಗಳನ್ನು ಒದಗಿಸಲಾಗಿದೆ.

2017-18 ನೇ ಸಾಲಿನಿಂದ 2024-25ನೇ ಸಾಲಿನವರೆಗೆ ನೋಂದಣಿಯಾದ ಅಭ್ಯರ್ಥಿಗಳಲ್ಲಿ 540 ಅಭ್ಯರ್ಥಿಗಳು ವಿವಿಧ ಜಾಬ್‍ರೋಲ್‍ಗಳಡಿ ವಿವಿಧ ತರಬೇತಿದಾರ ಸಂಸ್ಥೆಗಳ ಮೂಲಕ ತರಬೇತಿ ಪಡೆದಿದ್ದಾರೆ. 83 ವಿಕಲಚೇತನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ದೊರೆತಿದೆ. ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ 10 ಜನರಿಗೆ ತರಬೇತಿ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಬಿಎಂಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗಮೇಳದಲ್ಲಿ 1200 ಅಭ್ಯರ್ಥಿಗಳು ಭಾಗವಹಿಸಿದ್ದು, 75 ಜನರಿಗೆ ಉದ್ಯೋಗ ದೊರೆತಿದೆ ಎಂದು ಹೇಳಿದರು.

Tags:
error: Content is protected !!