Mysore
22
haze

Social Media

ಭಾನುವಾರ, 25 ಜನವರಿ 2026
Light
Dark

ನಂದಿನಿ ಬ್ರ್ಯಾಂಡ್‌ ಹೆಸರಲ್ಲಿ ಕಲಬೆರಕೆ ತುಪ್ಪ ತಯಾರಿಕೆ ಬೃಹತ್‌ ಜಾಲ ಪತ್ತೆ..!

ಬೆಂಗಳೂರು : ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ವಾರಾಟದ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮಹೇಂದ್ರ, ದೀಪಕ್, ಮುನಿರಾಜು ಬಂಧಿತರು. ಮತ್ತೋರ್ವ ಅಭಿ ಅರಸು ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು ೧.೨೬ ಕೋಟಿ ರೂ. ಮೌಲ್ಯದ ವಸ್ತುವನ್ನು ಬಂಧಿತರಿಂದ ಜಪ್ತಿ ವಾಡಲಾಗಿದೆ.

ಇದನ್ನು ಓದಿ: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ 

ಬೆಂಗಳೂರಿನಿಂದ ತಮಿಳುನಾಡಿಗೆ ನಂದಿನಿ ತುಪ್ಪ ಪೂರೈಕೆ
ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ವಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಒರಿಜಿನಲ್ ತುಪ್ಪ ಖರೀದಿಸುತ್ತಿದ್ದರು. ಇಲ್ಲಿ ಖರೀದಿಸಿದ ಒರಿಜಿನಲ್ ತುಪ್ಪ ತಮಿಳುನಾಡಿಗೆ ಕಳುಹಿಸುತ್ತಿದ್ದರು. ಅದನ್ನು ತಮಿಳುನಾಡಿನಲ್ಲಿ ಕಲಬೆರಕೆ ವಾಡುತ್ತಿದ್ದರು. ಒಂದು ಲೀಟರ್ ತುಪ್ಪಕ್ಕೆ ೪ ಲೀಟರ್ ನಕಲಿ ತುಪ್ಪ ಬೆರೆಸುತ್ತಿದ್ದರು. ಪಾಮ್ ಆಯಿಲ್, ತೆಂಗಿನ ಎಣ್ಣೆ ಮತ್ತು ಡಾಲ್ಡಾ ಬೆರೆಸುತ್ತಿದ್ದರು. ಅದನ್ನು ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ವಾಡುತ್ತಿದ್ದರು.

ಶುಕ್ರವಾರ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್‌ಪ್ರೈಸಸ್ ಮಾಲೀಕರಿಗೆ ಸೇರಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ವಾಡಿದ್ದಾರೆ. ದಾಳಿ ವೇಳೆ ಒಟ್ಟು ೮,೧೩೬ ಲೀ. ಕಲಬೆರಕೆ ತುಪ್ಪ, ೪ ವಾಹನ, ತೆಂಗು ಹಾಗೂ ಪಾಮ್ ಆಯಿಲ್, ನಕಲಿ ತುಪ್ಪ ತಾಯಾರು ಮಾಡುವ ಯಂತ್ರಗಳು ಸೇರಿ ೧,೨೬,೯೫,೦೦೦ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Tags:
error: Content is protected !!