ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರ ನಾಯಕತ್ವ ಮುಂದುವರೆಯುವ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಾಗೂ ಬಂದ ಬಿಜೆಪಿ ನಡುವೆ ಭಾರೀ ಟ್ವಟ್ ಸಮರವೇ ನಡೆದಿದೆ.
ಆಡಳಿತರೂಢ ಬಿಜೆಪಿಯಲ್ಲಿ ಎದ್ದಿರುವ ನಾಯಕತ್ವ ಗೊಂದಲವನ್ನು ಮುಂದಿಟ್ಟುಕೊಂಡು ಸಿ.ಎಂ ಹಾಗೂ ಬಿಜೆಪಿಗೂ ಸರಣಿ ಟ್ವೀಟ್ ಮೂಲಕವೇ ಬಿಸಿಮುಟ್ಟಿಸಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ರಾಜ್ಯ ಬಿಜೆಪಿ ಪಕ್ಷ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ಬಿಜೆಪಿ ಕಾಲೆಳೆದಿದೆ ಕಾಂಗ್ರೆಸ್.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಅಧಿಕಾರಕ್ಕೆ ಬರುವ ಹಗಲು ಗನಸು ಬೇಡ. ಮೊದಲು ನಿಮ್ಮ ಮನೆಯಲ್ಲಿ ಬಿದ್ದಿರುವ ಬೆಂಕಿಯನ್ನು ಆರಿಸಿಕೊಳ್ಳಿ ಎಂದು ಟಕ್ಕರ್ ಕೊಟ್ಟಿದೆ.
ಕಾಂಗ್ರೆಸ್ ಟ್ವೀಟ್
ಅಮಿತ್ ಶಾ ಬಂದು ಹೋದ ನಂತರ ಬಿಜೆಪಿಯಲ್ಲಿ ಮೋಡ ಕವಿದ ವಾತಾವರಣವಿದೆ! 40% ಸರ್ಕಾರದಲ್ಲಿ ‘3ನೇ ಸಿಎಂ’ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ! ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಅಮಿತ್ ಶಾ ಅವರ ಭೇಟಿಯ ಬಗ್ಗೆ ಸರ್ಕಾರದ ಯಾವೊಬ್ಬ ಸಚಿವರು ಮಾತಾಡದಿರುವುದು, ಸಂಭ್ರಮವಿಲ್ಲದಿರುವುದೇ ಇದಕ್ಕೆ ನಿದರ್ಶನ ಎಂದು ಟೀಕಿಸಿದೆ.
ಮುಂದುವರಿದು, ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನು ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ #PuppetCM ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ ಎಂದು ಬಿಜೆಪಿ ಉತ್ತರಿಸಲಿ ಎಂದು ಕಾಂಗ್ರೆಸ್ ಕೇಳಿದೆ.
ನಾನೂ ಕೂಡ ಸಿಎಂ ಆಕಾಂಕ್ಷಿ ಎಂದಿರುವ ಉಮೇಶ್ ಕತ್ತಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬಸವರಾಜ ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿvsಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಪ್ರಶ್ನಿಸಿದೆ.
ರಾಜ್ಯಕ್ಕೆ ಸಂಕಟ, ಬಿಜೆಪಿಗೆ ಅಧಿಕಾರದಾಟ. ಅತಿವೃಷ್ಟಿಯಿಂದ ಜನತೆ ಪರದಾಡುತ್ತಿರುವಾಗ ಸಮರೋಪಾಧಿಯಲ್ಲಿ ನೆರವಿನ ಕಾರ್ಯ ಮಾಡುವುದನ್ನು ಬಿಟ್ಟು ಬಿಜೆಪಿ 3ನೇ ಸಿಎಂ ಪ್ರತಿಷ್ಠಾಪನೆಗೆ ಕಸರತ್ತು ನಡೆಸುತ್ತಿದೆ. ರಾಜ್ಯ ಸಂಕಷ್ಟಕ್ಕೆ ಎದುರಾದಾಗಲೆಲ್ಲ ಬಿಜೆಪಿ ರಾಜಕೀಯದಾಟಕ್ಕೆ ಚಾಲನೆ ಕೊಡುತ್ತದೆ ಎಂದು ದೂರಿದೆ.
ಸಿಎಂ ಬೊಮ್ಮಾಯಿ ಅವರೇ, ಬಿಜೆಪಿಯ ನಕಲಿ ನೋಟ್ ದಂಧೆಕೋರರೊಂದಿಗೆ ನಿಮ್ಮದೇನು ಸಂಬಂಧ? ಸಮಾಜಘಾತುಕರು, ಬಿಟ್ ಕಾಯಿನ್ ದಂಧೆಕೋರರು, 40% ಕಮಿಷನ್ ಗಿರಾಕಿಗಳು, ನೇಮಕಾತಿ ಅಕ್ರಮ ನಡೆಸುವವರು, ನಕಲಿ ನೋಟ್ ದಂಧೆಕೊರರು ಆಡಿಸಿದಂತೆ ಆಡುವ ಬೊಂಬೆ ಸಿಎಂ ಮಾತ್ರವೇ? ಕುರ್ಚಿ ಉಳಿಸಿಕೊಳ್ಳಲು ಈ ಎಲ್ಲಾ ಬಗೆಯ ಭ್ರಷ್ಟರಿಗೆ ಬೆಂಬಲವಾಗಿ ನಿಂತಿದ್ದೀರಾ? ಎಂದು ಪ್ರಶ್ನೆಸಿದೆ.
ಎಷ್ಟು ಪ್ರಯತ್ನಿಸಿದರೂ ಜನತಾ ಪರಿವಾರಿಯಾಗಿದ್ದ ಬೊಮ್ಮಾಯಿ ಅವರನ್ನ ಕೇಶವ ಕೃಪಾದವರು ‘ಸಂಘಪರಿವಾರಿ’ಯಾಗಿ ಸ್ವೀಕರಿಸಲು ಒಪ್ಪಲೇ ಇಲ್ಲ! ಆಡಿಸಿ ನೋಡು ಎಂದು ಗೊಂಬೆಯಂತಿದ್ದ ಬೊಂಬೆ ಸಿಎಂ ಬೊಮ್ಮಾಯಿಯವರನ್ನು ಬೀಳಿಸಿ ನೋಡಲು ಹೊರಟಿದೆ ಹೈಕಮಾಂಡ್! ಈ ಬದಲಾವಣೆ ಯತ್ನ ಸರ್ಕಾರದ ವೈಫಲ್ಯಕ್ಕೋ, 3 ಸಿಎಂ ಎಂಬ ನಿಮ್ಮ ಸಂಪ್ರದಾಯಕ್ಕೋ? ಎಂದು ಕುಹಕವಾಡಿದೆ.
ಬೊಮ್ಮಾಯಿಯವರೇ, ಸಿಎಂ ಹುದ್ದೆಗೆ ‘ಕತ್ತಿ ವರಸೆ’ ಶುರುವಾಗಿದೆ ಎಂದರೆ ನೀವು ಕುರ್ಚಿಯಿಂದ ಇಳಿಯಲು ದಿನಗಳನ್ನಲ್ಲ, ಗಂಟೆಗಳನ್ನು ಎಣಿಸುತ್ತಿದ್ದೀರಿ ಎನಿಸುತ್ತಿದೆ! ಬೊಮ್ಮಾಯಿ ಅವರೇ, ಸಿಎಂ ಬದಲಾವಣೆ ಎಂಬ ಬೆಳವಣಿಗೆಗೆ ಕಾರಣವೇನು, ನಿಮ್ಮ ಆಡಳಿತ ವೈಫಲ್ಯವೇ? ಅಥವಾ ಬಿಜೆಪಿ ವರ್ಸಸ್ ಬಿಜೆಪಿ ಕಾದಾಟವೇ? ಅಥವಾ ಯಡಿಯೂರಪ್ಪನವರ ಕೋಪವೇ? ಎಂದು ಕಾಂಗ್ರೆಸ್ ಕಾಲೆಳೆದಿದೆ.
ಬಿಜೆಪಿ ತಿರುಗೇಟು
ಕಾಂಗ್ರೆಸ್ ನ ಆರೋಪಕ್ಕೆ ಬಿಜೆಪಿ ಕೂಡ ತಿರುಗೇಟು ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ. ಈ ಕುರಿತು ಸಚಿವ ಡಾ.ಕೆ.ಸುಧಾಕರ್ ಅವರುಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ. ಕಾಂಗ್ರೆಸ್ ಆಳ್ವಿಕೆ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು ಎಂದು ಟ್ವೀಟ್ ಮೂಲಕವೇ ತಿರುಗೇಟು ಕೊಟ್ಟಿದೆ.
ದಿಲ್ಲಿ ಪೋಸ್ಟ್ ಮ್ಯಾನ್ ಗಳು ಕಳುಹಿಸಿದ ಚೀಟಿ ಆಧಾರದ ಮೇಲೆ ಕಾಂಗ್ರೆಸ್ ಬದಲಾಯಿಸಿದ ಮುಖ್ಯಮಂತ್ರಿಗಳ ಸಂಖ್ಯೆಯ ಲೆಕ್ಕ ಕೊಡಬೇಕೆ?. ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂದಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದು ಕುಹಕವಾಡಿದ್ದಾರೆ.
ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಬರೆದುಕೊಂಡಿದ್ದಾರೆ.