ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ ಮೇಟಿಯವರು ನನಗೆ ಅತ್ಯಂತ ಆಪ್ತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಚಿವರು, ಹಿರಿಯ ನಾಯಕರು ಹಾಗೂ ಹಾಲಿ ಶಾಸಕರೂ ಆಗಿದ್ದ ಹೆಚ್.ವೈ.ಮೇಟಿಯವರು ಇಂದು 12.30ಗೆ ನಿಧನರಾಗಿದ್ದಾರೆ. ನಾನು ಮೂರು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದ್ದು, ವೈದ್ಯರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಮೇಟಿಯವರು ಇಷ್ಟುಬೇಗ ಇಹಲೋಕ ತ್ಯಜಿಸುತ್ತಾರೆಂದು ಭಾವಿಸಿರಲಿಲ್ಲ ಎಂದರು.
ಇದನ್ನು ಓದಿ: ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಸಕ ಎಚ್.ವೈ.ಮೇಟಿ ಅಂತ್ಯಕ್ರಿಯೆ
ಅತ್ಯಂತ ನಿಷ್ಠಾವಂತ ರಾಜಕಾರಣಿಯಾಗಿದ್ದು, ನನಗೆ ಅತ್ಯಂತ ಆಪ್ತರಾಗಿದ್ದರು. ಮೇಟಿಯವರು ಅರಣ್ಯ ಸಚಿವರಾಗಿ, ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಮೂಲತ: ಕೃಷಿಕರಾಗಿದ್ದ ಮೇಟಿಯವರು ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದರು. 1989 ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಸ್ಪರ್ಧಿಸಿ ಮೂರು ಬಾರಿ ಶಾಸಕರಾಗಿದ್ದರು. ಜನಪರ ಕಾಳಜಿಯಿಂದ ಸೇವೆ ಸಲ್ಲಿಸುತ್ತಿದ್ದ ಮೇಟಿಯವರು ಮಂತ್ರಿಯಾಗಿರಲಿ, ಸಂಸದರಾಗಿ, ಶಾಸಕರಾಗಿರಲಿ, ಪಕ್ಷಕ್ಕೆ ನಿಷ್ಠೆಯಿಂದ ದುಡಿಯುವಂತಹ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದರು.
ಜನರೊಂದಿಗೆ ಒಡನಾಟ ಹಾಗೂ ಜನಪ್ರಿಯತೆಯಿಂದ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅಂತಹ ನಿಷ್ಠಾವಂತ ನಾಯಕನೊಬ್ಬನ ಸಾವು ದು:ಖ ತಂದಿದ್ದು, ಇದು ನನಗೆ ವೈಯಕ್ತಿಕ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ , ಅಭಿಮಾನಗಳಿಗೂ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ಇಂದು ಸಂಜೆಯ ತನಕ ಬೆಂಗಳೂರಿನ ಕುಟುಂಬದವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಿ, ನಂತರ ಬಾಗಲಕೋಟೆಗೆ ತೆರಳಲಾಗುವುದು. ನಾಳೆ ಎರಡು ಗಂಟೆಯ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯುವ ಅಂತ್ಯಕ್ರಿಯೆಯಲ್ಲಿ ತಾವೂ ಪಾಲ್ಗೊಳ್ಳುವುದಾಗಿ ತಿಳಿಸಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…